ಉದಯವಾಹಿನಿ,ಚಿತ್ರದುರ್ಗ: ಶುಕ್ರವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 57.6 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2 ರಲ್ಲಿ 44.6 ಮಿ.ಮೀ, ತುರುವನೂರು 5.4 ಮಿ.ಮೀ, ಐನಹಳ್ಳಿ 6.4 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನ ರಾಂಪುರದಲ್ಲಿ 24.1 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿಯಲ್ಲಿ 5.4 ಮಿ.ಮೀ, ಹೆಚ್.ಡಿ.ಪುರ 20.8 ಮಿ.ಮೀ, ತಾಳ್ಯ 24.4 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 10.4 ಮಿ.ಮೀ, ಬಾಗೂರು 18.2 ಮಿ.ಮೀ, ಶ್ರೀರಾಂಪುರ 12 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 2 ಮಿ.ಮೀ, ನಾಯಕನಹಟ್ಟಿಯಲ್ಲಿ 14.2 ಮಿ.ಮೀ ಮಳೆಯಾಗಿದೆ. ಜಿಲ್ಲೆಯಾದ್ಯಂತ 7 ಮನೆಗಳು ಭಾಗಶಃ ಹಾನಿ: ಶುಕ್ರವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ 7 ಮನೆಗಳು ಭಾಗಶಃ ಹಾನಿಯಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 3 ಮನೆಗಳು, ಹಿರಿಯೂರು ತಾಲ್ಲೂಕಿನಲ್ಲಿ 3 ಮನೆಗಳು ಹಾಗೂ ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!