
ಉದಯವಾಹಿನಿ,ದೇವದುರ್ಗ: ಕೇಂದ್ರ ರಾಜ್ಯ ಸರ್ಕಾರ ವಿವಿಧ ಯೋಜನೆಗಳು ಜಾರಿಗೆ ಮಾಡಲಾಗಿದ್ದು, ಜನಸಾಮಾನ್ಯರಿಗೆ ಸದುಪಯೋಗವಾಗಲು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಸಾಧ್ಯವಾದಷ್ಟು ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸುವಂತೆ ಶಾಸಕಿ ಕರೆಮ್ಮ ಜಿ ನಾಯಕ ಹೇಳಿದರು
ಅವರು ತಾಲೂಕಿನ ಪಲಕನಮರಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಂದಲಿ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡುತ್ತಾ ಗ್ರಾಮೀಣ ಭಾಗದ ಜನ ಸಾಮಾನ್ಯರು ತಮ್ಮ ಅಗತ್ಯ ಕೆಲಸ ಕ್ಕಾಗಿ ತಾಲೂಕ ಕೇಂದ್ರಗಳಿಗೆ ಅಲೆದಾಟ ತಪ್ಪಿಸಲು ಪ್ರತಿ ವಾರಕ್ಕೊಮ್ಮೆ ಜನ ಸಂಪರ್ಕ ಸಭೆ ಮಾಡಲು ನಿರ್ಧರಿಸಿದ್ದು ಜನರ ಮೂಲಭೂತ ಸೌಲಭ್ಯಗಳು ಒದಗಿಸಲು ಪ್ರಾಮಾಣಿಕವಾಗಿ ಅಧಿಕಾರಿಗಳು ಕೆಲಸ ಮಾಡಬೇಕಾಗಿದೆ ಎಂದು ಶಾಸಕಿ ಕರೆಮ್ಮ ಜಿ.ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುತ್ ಸಮಸ್ಯೆ, ಶಾಲಾ ದುರಸ್ಥಿ, ಅಂಗನವಾಡಿ ಕಟ್ಟಡ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಅಧಿಕಾರಿಗಳ ಪಾತ್ರ ಬಹಳ ಮಹತ್ವದ್ದಾಗಿದೆ.
ನಾವೇಲ್ಲರೂ ತಾಲೂಕಿನ ಅಭಿವೃದ್ಧಿಗೆ ಶ್ರಮಿಸೋಣ. ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಜನ ಸಂಪರ್ಕ ಸಭೆಗಳನ್ನು ಆಯೋಜಿಸುತ್ತಿದ್ದೇನೆ. ಸಾರ್ವಜನಿಕರು, ರೈತರು ಯಾವಾಗ ಬೇಕಾದರು ತಮ್ಮಗೆ ಕಷ್ಟ ಬಂದಾಗ ನನ್ನನ್ನು ಸಂಪರ್ಕಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ವಾರಕ್ಕೊಮ್ಮೆ ಜನ ಸಂಪರ್ಕ ಸಭೆಯನ್ನು ತಾಲೂಕಿನ ಎಲ್ಲ ಗ್ರಾಮ ಪಂಚಾಯತ ಮಟ್ಟದಲ್ಲಿ ಆಯೋಜನೆ ಮಾಡಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ.
**ಕರೇಮ್ಮ ಜಿ ನಾಯಕ ಶಾಸಕರು ದೇವದುರ್ಗ **
ಜನರ ಸೇವೆಗಾಗಿ ದಿನದ 24 ಗಂಟೆ ಕೆಲಸ ಮಾಡಲುಸದಾ ನಿಮ್ಮೊಂದಿಗೆ ಇದ್ದೇನೆ, ಕ್ಷೇತ್ರದ ಮತದಾರರು ಅಭಿವೃದ್ಧಿಗೆ ಸಹಕಾರ ನೀಡಬೇಕೆಂದರು.ಈ ಸಂದರ್ಭದಲ್ಲಿ ತಹಶೀಲ್ದಾರ ಚೆನ್ನಮಲ್ಲಪ್ಪ ಘಂಟಿ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಪಾಟೀಲ್, ಸಿಡಿಪಿಒ ವೆಂಕಟಪ್ಪ, ಸಮಾಜ ಕಲ್ಯಾಣ ಅಧಿಕಾರಿ ಮಂಜುಳಾ ಅಸುಂಡಿ, ಜೆಡಿಎಸ್ ತಾಲೂಕ ಅಧ್ಯಕ್ಷ ಬುಡ್ಡನಗೌಡ ಪಾಟೀಲ್ ಜಾಗಟಗಲ್, ಸಿದ್ದನಗೌಡ ಮೂಡಲಗುಂಡ, ಸಿದ್ದಣ್ಣ ತಾತಾ ಮುಂಡರಗಿ, ಶಾಲಂ ಉದ್ದಾರ, ದಾವುದ್ ಔಂಟಿ , ಇಸಾಕ್ ಮೇಸ್ತ್ರಿ, ಗೋವಿಂದರಾಜ್ ನಾಯಕ ಚಿಕ್ಕಗುಡ್ಡದ್, ಸಿದ್ದಲಿಂಗಪ್ಪ ಗೌಡ ನಾಗಡದಿನ್ನಿ, ಮರಿಯಪ್ಪ ಗೇಜ್ವೆಭಾವಿ, ವೆಂಕನಗೌಡ ವಕೀಲರು,ಹನುಮಂತ್ರಾಯ ಚಿಂತಲಕುಟ ವಕೀಲರು ಸೇರಿದಂತೆ ಇತರರು ಇದ್ದರು.
