ಉದಯವಾಹಿನಿ ಕೆ.ಆರ್.ಪೇಟೆ: ತಾಲ್ಲೂಕು ಎಸ್ಸಿಎಸ್ಟಿ ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಮೆಡಿಕಲ್ ಸೀಟು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪಟ್ಟಣದ ರಾಮದಾಸ್ ಹೋಟೆಲ್ ನಲ್ಲಿ ನಡೆಯಿತು. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಮೆಡಿಕಲ್ ಸೀಟು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಶಾಸಕ ಹೆಚ್.ಟಿ.ಮಂಜು ಹಿಂದಿನಿ0ದ ಶೋಷಣೆಗೆ ಒಳಪಟ್ಟ ಸಮುದಾಯಗಳ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ಶಿಕ್ಷಣವಂತರಾಗಿ ತಂದೆ ತಾಯಿಗಳಿಗೆ, ಗ್ರಾಮಕ್ಕೆ, ತಾಲ್ಲೂಕಿಗೆ ಉತ್ತಮ ಹೆಸರು, ಕೀರ್ತಿ ತಂದುಕೊಡಲು ಶ್ರಮಿಸಬೇಕು. ವಿದ್ಯಾರ್ಥಿ ದಿಸೆಯಿಂದಲೇ ಸತತ ಪರಿಶ್ರಮದಿಂದ ಅಭ್ಯಾಸ ಮಾಡಬೇಕು, ಒಳ್ಳೆಯ ಹವ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಶುಭಕೋರಿದರು. ಅಲ್ಲದೇ ತಮ್ಮೆಲ್ಲರ ಆಶೀರ್ವಾದದಿಂದ ನಾನು ಶಾಸಕನಾಗಿದ್ದು ಸದಾಕಾಲ ನಿಮ್ಮ ಜೊತೆ ಇರುತ್ತೇನೆ ಎಂದು ತಿಳಿಸಿದರು. ಆರ್.ಟಿ.ಓ.ಅಧಿಕಾರಿ ಮಲ್ಲಿಕಾರ್ಜುನ್ ಮಾತನಾಡಿ ಇತಿಹಾಸವನ್ನು ನಾವು ಏಕೆ ತಿಳಿಯಬೇಕು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಏಕೆ ತಿಳಿಯಬೇಕು ದಯಮಾಡಿ ಎಲ್ಲರೂ ಪುಸ್ತಕಗಳನ್ನು ಓದಬೇಕು ಇತಿಹಾಸ ತಿಳಿಯಬೇಕು ಅದರಿಂದ ಪ್ರೇರಿತರಾಗಿ ಪ್ರತಿಭಾನ್ವಿತರಾಗಿ ಹೊರಹೊಮ್ಮಬೇಕು. ಎಲ್ಲಾ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭವಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ವಿಚಾರವಾದಿ ರಘೋತ್ತಮ ಪ್ರಧಾನ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಎಸ್ಸಿಎಸ್ಟಿ ನೌಕರರ ಸಂಘದ ಅಧ್ಯಕ್ಷ ಯೋಗೇಶ್ ಹಳೆಯೂರು, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಖಜಾಂಚಿ ಕುಮಾರ್, ಸಹಕಾರ್ಯದರ್ಶಿಗಳಾದ ನಂಜು0ಡ, ಅಣ್ಣಯ್ಯ ಸಂಘಟನಾ ಕಾರ್ಯದರ್ಶಿಗಳಾದ ರತ್ನಮ್ಮ, ಮಹೇಶ್. ಸಾಮಾಜಿಕ ಅರಣ್ಯಾಧಿಕಾರಿ ಶೈಲೇಂದ್ರಕುಮಾರ್, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ್. ಕನ್ನಡ ಪ್ರಾಧ್ಯಾಪಕರಾದ ಡಾ.ಹೆಚ್.ಡಿ.ಉಮಾಶಂಕರ್ ಎಲ್ಲಾ ನೌಕರರು, ಪ್ರತಿಭಾವಂತ ಮಕ್ಕಳು, ಪೋಷಕರು ಭಾಗವಹಿಸಿದ್ದರು.
