ಉದಯವಾಹಿನಿ, ಬೆಂಗಳೂರು : ಹಾಸನದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣನವರ ಸಂಸತ್ ಸ್ಥಾನವನ್ನು ಹೈಕೋರ್ಟ್ ಅನರ್ಹಗೊಳಿಸಿದ ಬೆನ್ನಲ್ಲೆ ಶಾಸಕ ಹೆಚ್.ಡಿ. ರೇವಣ್ಣ ಅನರ್ಹತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ರಾಜ್ಯ ಉಚ್ಛ ನ್ಯಾಯಾಲಯ ಕೈಗೆತ್ತಿಕೊಂಡಿದ್ದು, ಶಾಸಕ ಹೆಚ್.ಡಿ. ರೇವಣ್ಣ ಸೇರಿದಂತೆ ಎಲ್ಲ ಅಭ್ಯರ್ಥಿಗಳಿಗೂ ನೋಟಿಸ್ ಜಾರಿ ಮಾಡಿದೆ.
ಶಾಸಕ ಹೆಚ್.ಡಿ. ರೇವಣ್ಣ ವಿರುದ್ಧ ಪರಾಜಯಗೊಂಡಿದ್ದ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್‌ನ ಏಕಸದಸ್ಯ ಪೀಠ ಕೈಗೆತ್ತಿಕೊಂಡಿದ್ದು, ಶಾಸಕ ಹೆಚ್.ಡಿ. ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೂ ವಿಧಾನಸಭಾ ಕಾರ್ಯದರ್ಶಿ ಮೂಲಕ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿದೆ. ಚುನಾವಣಾ ಅಕ್ರಮಗಳಿಂದ ಹೆಚ್.ಡಿ. ರೇವಣ್ಣ ಅವರು ಜಯಗಳಿಸಿದ್ದಾರೆ. ೨ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಸಹ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಹಾಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!