
ಉದಯವಾಹಿನಿ,ದೇವರಹಿಪ್ಪರಗಿ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಗಾಯಗೊಂಡ ಬಿದ್ದಿರುವ ಘಟನೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಕೂಡಲೇ ಗಾಯಾಳು ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮತಕ್ಷೇತ್ರದ ಹೂವಿನಹಿಪ್ಪರಗಿ ಯಿಂದ ಮುದ್ದೇಬಿಹಾಳ ಖಾಸಗಿ ಕಾರ್ಯಕ್ರಮಕ್ಕೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಹೊರಡುವ ಮಾರ್ಗದಲ್ಲಿ ಡವಳಗಿ ಗ್ರಾಮದ ಕೆಇಬಿ ಹತ್ತಿರ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದ ಬೈಕ್ ಸವಾರನಿಗೆ ಅಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರ ಕೂಡಲೇ ವಾಹನ ನಿಲ್ಲಿಸಿ ಅಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ ಮಾನವೀಯ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗಿದೆ.
