Exif_JPEG_420

ಉದಯವಾಹಿನಿ ಸವದತ್ತಿ:ಡಾ||ಸರ್ವೇಪಲ್ಲಿ ರಾಧಾಕೃಷ್ಣನ್ ರವರ 135 ನೇ ಜನ್ಮದಿನಾಚರಣೆ ಹಾಗೂ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ/ ಕಲೋತ್ಸವ ಸ್ಪರ್ಧೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಶಾಸಕರಾದ ವಿಶ್ವಾಸ ವೈದ್ಯ ಅವರು ಭಾಗವಹಿಸಿ ಡಾ:ರಾಧಾಕೃಷ್ಣನರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಲಾಯಿತು . ಶಾಸಕರಾದ ವಿಶ್ವಾಸ ವೈದ್ಯ ಅವರು ಮಾತನಾಡಿ ರೈತರು ಸೈನಿಕರು ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು ಇವರು ಸಮಾಜದ ದೇಶದ ಭವಿಷ್ಯ ರೂಪಿಸುವ ಕಾಯಕ ಜೀವಿಗಳು ಎಂದರು . ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ದಂಡಿನ ಅವರು ಮಾತನಾಡಿ ಒಂದೇ ರಾತ್ರಿಯಲ್ಲಿ ಹಣವಂತ ಆಗಬಹುದು ಆದರೆ ಜ್ಞಾನವಂತ ಆಗಲು ಸಾಧ್ಯವಿಲ್ಲ ಆ ಜ್ಞಾನವಂತರಾಲು ಶಿಕ್ಷಕರು ಬಹು ಮುಖ್ಯ ಅಂತ ಹೇಳಿದರು. ಈ ಸಂದರ್ಭದಲ್ಲಿ ಸರಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಗಳಾದ ಆನಂದ ಮೂಗಬಸವ ಎಪಿಎಂಸಿ ಅಧ್ಯಕ್ಷರಾದ ರವೀಂದ್ರ ಯಲಿಗಾರ ಸವದತ್ತಿ ತಹಸೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶವಂತ ಕುಮಾರ್ ತಾಲೂಕಾ ಆರೋಗ್ಯಾಧಿಕಾರಿಗಳಾದ ಶ್ರೀಪಾದ ಸಬನೀಸ ಶಿಕ್ಷಣ ಸಂಯೋಜಕರಾದ ಎಮ ಡಿ ಹುದ್ದಾರ ತಾಲೂಕಿನ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.
