
ಉದಯವಾಹಿನಿ, ಮುದಗಲ್ಲ: ಪಟ್ಟಣದಲ್ಲಿ ರವಿವಾರ ರಾತ್ರಿ ಆರಂಭಗೊಂಡ ಜಿಟಿಜಿಟಿ ಮಳೆ ಮಂಗಳವಾರ ನಸುಕಿನ ಜಾವದ ವರೆಗೆ ಸುರಿಯಿತು. ಬಳಿಕ ಕೆಲಕಾಲ ಬಿರುಸಾಗಿ ಸುರಿದ ಮಳೆ ಮತ್ತೆ ಜಿಟಿಜಿಟಿಯಾಗಿ ಬೀಳುತ್ತಿದೆ. ಬಿಡುವು ಕೊಡದೆ ಮಳೆ ಸುರಿಯುತ್ತಿರುವ ಕಾರಣ ಮಂಗಳವಾರ ಬೆಳಿಗ್ಗೆ ದೈನಂದಿನ ಕೆಲಸಕ್ಕೆ ಹೋಗುವವರಿಗೆ ತೊಂದರೆಯಾಗಿದೆ. ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಪ್ರಮುಖ ರಸ್ತೆಗಳಲ್ಲಿ ಜನಸಂಚಾರ ವಿರಳವಾಗಿದೆ.ಬೀದಿ ಬದಿಯ ವ್ಯಾಪಾರಿಗಳಿಗೆ ಜಿಟಿ ಜಿಟಿ ಮಳೆ ಕಾಟ..ವ್ಯಾಪಾರಿಗಳಿಗೆ ಮೋಡ ಮುಸುಕಿದ ವಾತಾವರಣ ಹಾಗೂ ತುಂತುರು ಮಳೆ ನಷ್ಟವನ್ನುಂಟು ಮಾಡಿದೆ.
