ಉದಯವಾಹಿನಿ,ಸಿರುಗುಪ್ಪ : ನಗರದ ಎ.ವಿ.ಎಸ್. ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್ ಬಳ್ಳಾರಿ, ಶಾಲಾ ಶಿಕ್ಷಣ ಇಲಾಖೆ ಸಿರುಗುಪ್ಪ ವತಿಯಿಂದ ಡಾ.ಸರ್ವೆಪಲ್ಲೇ ರಾಧಾಕೃಷ್ಣನ್‌ರವರ ೧೩೫ನೇ ಜನ್ಮದಿನಾಚರಣೆ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆಯನ್ನು ಶಾಸಕ ಬಿ.ಎಮ್.ನಾಗರಾಜ ಅವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಗುರುಗಳ ಸ್ಥಾನದಲ್ಲಿ ನಿಂತು ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಜೀವನವನ್ನೇ ಮುಡಿಪಾಗಿಟ್ಟು ಮಾರ್ಗದರ್ಶನ ನೀಡುವ ಶಿಕ್ಷಕರ ಪಾತ್ರ ಅನನ್ಯವಾದದ್ದು.
ಕಳೆದ ಬಾರಿಯ ನಮ್ಮ ಅವಧಿಯಲ್ಲಿ ಪ್ರೌಡಶಾಲೆಗಳು, ಕಾಲೇಜುಗಳು ನಿರ್ಮಾಣವಾಗಿವೆ. ಕೆಲವು ಗ್ರಾಮಗಳಲ್ಲಿ ಶಾಲೆಯ ಹೆಚ್ಚುವರಿ ಕೊಠಡಿಗಳು, ಶೌಚಾಲಯ, ಹಾಗೂ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಜಾಗದ ಕೊರತೆ ಹಾಗೂ ಬಹಳಷ್ಟು ಶಿಕ್ಷಕರ ಕೊರತೆಯಿರುವುದರ ಮನವಿ ಬಂದಾಗ ಸರ್ಕಾರದ ಗಮನಕ್ಕೆ ತಂದು ಅತಿಥಿ ಶಿಕ್ಷಕರ ನೇಮಕ ಮಾಡಿಸಲಾಗಿದೆ.
ಇನ್ನಿತರ ಸಮಸ್ಯೆಗಳಾದ ಸುತ್ತುಗೋಡೆ, ಶುದ್ದ ಕುಡಿಯುವ ನೀರಿಗಾಗಿ ಸಂಬAದಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದರು.
ಶಿಕ್ಷಕ ಸಮೂಹವನ್ನುದ್ದೇಶಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗರ‍್ರಪ್ಪ ಅವರು ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿ ರಾಷ್ಟçಪತಿಯಾದ ಡಾ.ಸರ್ವೆಪಲ್ಲೆ ರಾಧಾಕೃಷ್ಣನ್ ಅವರು ಮಕ್ಕಳ ಭವಿಷ್ಯದ ಭದ್ರ ಬುನಾದಿಗೆ ಶಿಕ್ಷಕರೇ ಅಡಿಪಾಯವೆಂದು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿದರೆಂದರು.
ಇದೇ ವೇಳೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಪವನ್‌ಕುಮಾರ್.ಎಸ್.ದಂಡಪ್ಪನವರ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ತಮ್ಮನಗೌಡ ಪಾಟೀಲ್, ದೈಹಿಕ ಶಿಕ್ಷಕರ ಸಂಘದ ರಹಮತುಲ್ಲಾ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಲಿಂಗರಾಜುರೆಡ್ಡಿ, ತಾಲೂಕು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎನ್.ಕರಿಬಸಪ್ಪ, ಶಿಕ್ಷಣ ಇಲಾಖೆಯ ಇ.ಸಿ.ಓ, ಬಿ.ಆರ್.ಪಿ, ಸಿ.ಆರ್.ಪಿ, ಶಿಕ್ಷಕರು ಹಾಗೂ ಮಕ್ಕಳು ಇದ್ದರು.
