
ಉದಯವಾಹಿನಿ ದೇವರಹಿಪ್ಪರಗಿ:ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಧೋರಣೆಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಇದನ್ನು ಖಂಡಿಸಿ ಸೆ. 8ರ ಶುಕ್ರವಾರದಂದು ಎಲ್ಲ ತಾಲೂಕು ಕೇಂದ್ರಗಳಲ್ಲಿ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿಯ ರೈತ ಮೋರ್ಚ ರಾಜ್ಯ ಕಾರ್ಯದರ್ಶಿಯಾದ ಸಂಜಯ ಪಾಟೀಲ(ಕನಮಡಿ) ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರದಂದು ನಡೆದ ರೈತಮೋರ್ಚಾ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ನೂರು ದಿನ ಕಳೆದರೂ ರೈತ, ಕಾರ್ಮಿಕ ಹಾಗೂ ಜನವಿರೋಧಿ ಸರ್ಕಾರ ಆಗಿದೆ,‘ಪಕ್ಷದ ನಾಯಕರ ನಿರ್ದೇಶನದಂತೆ ಅಂದು ಪ್ರತಿಭಟನೆ ನಡೆಸಲಾಗುವುದು.ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾದರೂ ಪರಿಹಾರ ನೀಡುತ್ತಿಲ್ಲ. ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳಾದ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ಪಾಲು ನಿಲ್ಲಿಸಲಾಗಿದೆ. ರೈತರ ಮಕ್ಕಳಿಗೆ ವರವಾಗಿದ್ದ ರೈತ ವಿದ್ಯಾನಿಧಿ ಯೋಜನೆ ಸ್ಥಗಿತಗೊಳಿಸಲಾಗಿದೆ, ಶ್ರಮಶಕ್ತಿ ರೈತ ಸಂಪದ ಸಿರಿದಂತೆ ಹಲವಾರು ಯೋಜನೆಗಳನ್ನು ನಿಲ್ಲಿಸಿದೆ,‘ರಾಜ್ಯ ಸರ್ಕಾರದ ರೈತ, ಕಾರ್ಮಿಕ ಜನ ವಿರೋಧಿ ನೀತಿಗಳಿಂದಾಗಿ ಜನಸಾಮಾನ್ಯರು ಹೈರಾಣಾಗಿದ್ದಾರೆ ಎಂದು ಆರೋಪಿಸಿದರು.ಬಿಜೆಪಿ ಬೆಳಗಾವಿ ವಿಭಾಗೀಯ ಸಂಘಟನಾ ಕಾರ್ಯದರ್ಶಿಯಾದ ಪ್ರಕಾಶ ಅಕ್ಕಲಕೋಟ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಿದ್ದು ಬುಳ್ಳಾ ಮಾತನಾಡಿ ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ವಿರೋಧಿ ನೀತಿಗಳು ಹಾಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ, ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾದರೂ ಯಾವುದೇ ಕಾಮಗಾರಿ ಕೈಗೊಳ್ಳದೆ ಜನರಿಗೆ ಮೋಸ ಮಾಡಿದೆ. ಶುಕ್ರವಾರದಂದು ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಿಂದ ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ತಹಶೀಲ್ದಾರ್ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಆದ್ದರಿಂದ ತಾಲೂಕಿನ ಎಲ್ಲಾ ರೈತರು ಸಾರ್ವಜನಿಕರು ಭಾಗವಹಿಸಬೇಕೆಂದು ಕೋರಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಿಬಿನಾಳ, ಓಬಿಸಿ ಮೋರ್ಚ ತಾಲೂಕು ಘಟಕದ ಅಧ್ಯಕ್ಷರಾದ ಗುರುನಾಥ ಮುರುಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಭೀಮನಗೌಡ ಲಚ್ಯಾಣ, ಮುಖಂಡರುಗಳಾದ ಸಂಗನಗೌಡ ಬಿರಾದಾರ, ಬಸವರಾಜ ಕಲ್ಲೂರ, ಸೋಮು ದೇವೂರ, ಪ್ರಕಾಶ ದೊಡಮನಿ, ಆಕಾಶ ಕಬ್ಬಿನ ಸೇರಿದಂತೆ ಮಂಡಲದ ಪದಾಧಿಕಾರಿಗಳು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
