
ಉದಯವಾಹಿನಿ ಪೀಣ್ಯ ದಾಸರಹಳ್ಳಿ : ಪ್ರತಿಯೊಬ್ಬ ಜೀವನ ದಲ್ಲಿಯೂ ಗುರಿ ಮತ್ತು ಗುರು ಅನಿವಾರ್ಯ ಎಂದು ಮಾಜಿ ಪಾಲಿಕೆ ಸದಸ್ಯ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಭಾವಿ ಮುಖಂಡ ಕೆ ನಾಗಭೂಷಣ್ ಹೇಳಿದರು.
ಕಮ್ಮಗೊಂಡನಹಳ್ಳಿಯ ಎಂ.ಎನ್.ಟಿ.ಐ ಕಾಲೇಜಿನಲ್ಲಿ ಕಾಲೇಜಿನ ಅಧ್ಯಕ್ಷ ಆರ್ ಶಾಂತಕುಮಾರ್ ಅವರ ನೇತೃತ್ವದಲ್ಲಿ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ನಂತರ ಅವರು ನಮ್ಮ ದೇಶ ಕಂಡ ಅತ್ಯಂತ ಶ್ರೇಷ್ಠ ರಾಷ್ಟ್ರಪತಿಗಳು, ತತ್ವಜ್ಞಾನಿಗಳು ಮತ್ತು ಪ್ರಾಧ್ಯಾಪಕರಾಗಿದ್ದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುತ್ತಿರುವುದು ಅರ್ಥಪೂರ್ಣ ಎಕೆಂದರೆ ರಾಧಾಕೃಷ್ಣನ್ ಅವರು ಶಿಕ್ಷಕರ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿಯನ್ನು ಹೊಂದಿದವರಾಗಿದ್ದರು ಎಂದು ಶಿಕ್ಷಕರಿಗೆ ಮತ್ತು ಶಿಕ್ಷಕಿಯರಿಗೆ ಸನ್ಮಾನಿಸಿ ಉಡುಗರೆ ನೀಡಿ ಗೌರವಿಸಿ ಕೆ.ನಾಗಭೂಷಣ್ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ನಿರ್ದೇಶಕರಾದ ಜಿ.ರಾಜೇಂದ್ರ, ಹರಿದಾಸ, ಲಕ್ಷ್ಮೀ ಶ್, ಶಿಕ್ಷಣ ತಜ್ಞ ಪಿ.ಎನ್.ಶ್ರೀನಿವಾಸ್, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಉಪನ್ಯಾಸಕಿಯರು, ವಿದ್ಯಾರ್ಥಿಗಳು, ಪೋಷಕರು, ಕಮ್ಮಗೊಂಡನಹಳ್ಳಿ ಸಮಸ್ತ ನಾಗರಿಕ ಬಂಧು ಭಗನಿಯರು ಮುಂತಾದವರು ಇದ್ದರು.
