
ಉದಯವಾಹಿನಿ ನಾಗಮಂಗಲ: ವಿಧಾನಸಭಾ ಕ್ಷೇತ್ರದ ದೇವಲಾಪುರ ಹೋಬಳಿ ಕೌಡ್ಲೆ ಗಡಿಭಾಗದಿಂದ ನಾಗಮಂಗಲ- ಬೋಗಾದಿ ಮಾರ್ಗವಾಗಿ ಹಾದುಹೋಗಿರುವ ಬೆಂಗಳೂರು ಸಮೀಪ ಮಾಗಡಿ ಸೋಮವಾರಪೇಟೆ ಜಲಸೂರು ರಸ್ತೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೌಡ್ಲೆ ಗೇಟ್ ನಿಂದ ನಾಗಮಂಗಲ- ಬೋಗಾದಿ ಮಾರ್ಗವಾಗಿ ಹಾದುಹೋಗುವ ಮಾಗಡಿ -ಸೋಮವಾರಪೇಟೆ ಜಲಸೂರು ರಸ್ತೆಗೆ ಸಂಬಂಧಿಸಿದಂತೆ ಪರಶೀಲನೆ ನಡೆಸಿದರು.2013 ರಿಂದ 2018 ರಲ್ಲಿ ರಸ್ತೆ ಕಾಮಗಾರಿಗೆ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಅನುಮೋದನೆ ದೊರಕಿದ್ದು, 2020 ರಲ್ಲಿ ಕಾಮಗಾರಿ ಪ್ರಾರಂಭವಾಗಿರುತ್ತದೆ. ಮೂರು ವರ್ಷದಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲದ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.ಕೋವಿಡ್ ಸಂದರ್ಭದಲ್ಲಿ ಅಧಿಕಾರಿಗಳ ಬದಲಾವಣೆ, ಭೂ ಸ್ವಾಧೀನ, ಅರಣ್ಯ ಇಲಾಖೆಗೆ ಸೇರಿದ ಸ್ಥಳದಿಂದ ಕೆಲವು ಭಾಗಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಆದ್ದರಿಂದ ರಸ್ತೆಯ ಕಾಮಗಾರಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದು ಪರಿಶೀಲನೆ ನಡೆಸಿದರು.ಬೆಂಗಳೂರು- ಜಲಸೂರು ರಸ್ತೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಸೇರಿದ ರಸ್ತೆ ಪಕ್ಕದ ಹಾದು ಹೋಗುವ 13 ಕಿ.ಮೀ ಸಮಸ್ಯೆ ಇದ್ದು, ಇದರಲ್ಲಿ 8 ಕಿ.ಮೀ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿರುತ್ತದೆ. ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಅರಣ್ಯ ಇಲಾಖೆಯಿಂದ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಂಡು ಆರು ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಕೆಶಿಪ್ ಸೇರಿದಂತೆ ಇತರೆ ಅಧಿಕಾರಿಗಳು ಪರಿಶೀಲನೆಯಲ್ಲಿ ಭಾಗವಹಿಸಿದ್ದು, ಮಂಡ್ಯ ಜಿಲ್ಲಾ ವ್ಯಾಪ್ತಿಯ ಸಮಸ್ಯೆ ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಸಭೆ ನಡೆಸಿ ಪರಿಹರಿಸಲಾಗುವುದು ಎಂದರು.ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಡಾ: ಕುಮಾರ, ಉಪವಿಭಾಗಾಧಿಕಾರಿ ನಂದೀಶ್, ಕೆಶಿಪ್ ಚೀಫ್ ಇಂಜಿನಿಯರ್ ಶಿವಕುಮಾರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
