ಉದಯವಾಹಿನಿ, ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಮತ್ತು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಇಂದು ಆಯೋಜಿಸಲಾಗಿದ್ದ ಯೋನೆಕ್ಸ್ ಸನ್‌ರೈಸ್ ೪೬ನೇ ಅಂತರಾಜ್ಯ ಮಟ್ಟದ ಇಂಟರ್ ಝೋನಲ್ ಮತ್ತು ಜ್ಯೂನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಉದ್ಘಾಟನಾ ಮಹೋತ್ಸವದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರು ಭಾಗವಹಿಸಿ ಮಾತನಾಡಿದರು. ಇದೇ ಸಂಧರ್ಭದಲ್ಲಿ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಘನ ಸರ್ಕಾರದ ಗೌರವಾನ್ವಿತ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರೊಂದಿಗೆ ಸಚಿವರಾದ ಸಂತೋಷ್ ಲಾಡ್ ಮತ್ತು ವಿಧಾನಪರಿಷತ್ ಸದಸ್ಯರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ.ಗೋವಿಂದರಾಜು ರವರು ಕೆಲ ಹೊತ್ತು ಬ್ಯಾಡ್ಮಿಂಟನ್ ಆಟ ಆಡಿ, ಆಟಗಾರರಿಗೆ ಸ್ಪೂರ್ತಿ ತುಂಬಿದರು. ಕಾರ್ಯಕ್ರಮದಲ್ಲಿ ಎನ್.ಐ.ಕೆ.ಎಸ್ ವಲಯ ನಿರ್ದೇಶಕ ಎಂ.ಎನ್.ನಟರಾಜ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಮನೋಜಕುಮಾರ್ ಹೊಸಪೇಟಿಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!