
ಉದಯವಾಹಿನಿ ಕೆಂಭಾವಿ : ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಕರ್ನಾಟಕ ಸರ್ಕಾರದ ನಿಗಮ ಮಂಡಳಿಯಲ್ಲಿ ಬಸನಗೌಡ ಹೊಸಮನಿ ಯಾಳಗಿ ಅವರಿಗೆ ಸ್ಥಾನ ಕೊಡಬೇಕು ಎಂದು ಆರ್ ಬಿ ಕನ್ನಡಿಗ ಆಗ್ರಹಿಸಿದ್ದಾರೆ.ಹಲವು ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ನಿಷ್ಠೆಯಿಂದ ಪಕ್ಷಕ್ಕಾಗಿ ಹಗಲು ರಾತ್ರಿ ಎನ್ನದೆ ದುಡಿದ ನಾಯಕ, ಬಸನಗೌಡ ಹೊಸಮನಿ ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಕೊಟ್ಟು ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷವನ್ನು ಗಟ್ಟಿಗೊಳಿಸಬೇಕು, ಮುಂದೇ ಬರುವ ಜಿಲ್ಲಾ ಪಂ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದರು.
