ಉದಯವಾಹಿನಿ ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿಯಲ್ಲಿರುವ ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಗಡಿ ಪ್ರದೇಶಗಳಲ್ಲಿ ಕಾನೂನು ಭಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ರೌಡಿಶೀಟರ್‌ಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಆಂಧ್ರ ಪ್ರದೇಶದ ಗಡಿಭಾಗವಾದ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಭಾಹಿರ ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಾಗೇಪಲ್ಲಿ ನೂತನ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಶಾಂತ್ ವರ್ಣಿ ರೌಡಿ ಶೀಟರ್‌ಗಳ ಪರೇಡ್ ನಡೆಸಿ ರೌಡಿಶೀಟರ್‌ಗಳಿಗೆ ಖಡಕ್ ಎಚ್ಚರಿಕೆ ಕೊಟ್ಟು ಕಾನೂನು ಮೀರಿ ವರ್ತನೆ ಮಾಡಿದರೆ ಗೂಂಡಾ ಕಾಯಿದೆ ಅಡಿ ಗಡಿಪಾರು ಮಾಡುವುದಾಗಿ ಎಚ್ಚರಿಕೆ ನೀಡಿದರು.
