
ಉದಯವಾಹಿನಿ ದೇವರಹಿಪ್ಪರಗಿ: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ಪರ ಯೋಜನೆಗಳಾದ ರೈತ ವಿದ್ಯಾನಿಧಿ, ಶ್ರಮಶಕ್ತಿ ಯೋಜನೆ, ಭೂ ಸಿರಿ ಯೋಜನೆ, ರೈತ ಸಂಘದ ಯೋಜನೆ, ರೈತರಿಗೆ ಕಿಸಾನ್ ಸಮ್ಮಾನ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿತ್ತು ಈ ಎಲ್ಲಾ ಯೋಜನೆಗಳನ್ನು ರದ್ದು ಮಾಡುವ ಮೂಲಕ ರೈತರ ಕಾರ್ಮಿಕರ ಜನಸಾಮಾನ್ಯರ ಹಾಗೂ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿ ರೈತ ವಿರೋಧಿ ಸರ್ಕಾರವಾಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಿಬಿನಾಳ ಆರೋಪಿಸಿದ್ದಾರೆ.ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಿಂದ ಮೆರವಣಿಗೆ ಮೂಲಕ ಡಾ . ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಹಶೀಲ್ದಾರ ಕಚೇರಿ ಆವರಣದಲ್ಲಿ ಪ್ರತಿಭಟಿಸಿದ ಬಿಜೆಪಿ ಮುಖಂಡರಿಂದ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರ ರೈತ ವಿರೋಧಿ ನೀತಿಗಳು ಹಾಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ,ಬರ ಪರಿಸ್ಥಿತಿ ನಿರ್ಮಾಣವಾದರೂ ಯಾವುದೇ ಕಾಮಗಾರಿ ಕೈಗೊಳ್ಳದೆ ರೈತ, ಕಾರ್ಮಿಕ ಹಾಗೂ ಜನವಿರೋಧಿ ನೀತಿ ಅನುಸರಿಸುತ್ತಿದೆ. ರೈತರ ಬಗ್ಗೆ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲರು ರೈತರ ಆತ್ಮಹತ್ಯೆಗಳ ಬಗ್ಗೆ ಹೇಳಿಕೆಗೆ ತೀವೃ ಖಂಡನೆ ವ್ಯಕ್ತಪಡಿಸಿದರು .
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಿದ್ದು ಬುಳ್ಳಾ ಅವರು ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಗಳು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಹಾಗೂ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾದರೂ ಯಾವುದೇ ಕಾಮಗಾರಿ ಕೈಗೊಳ್ಳದೆ ಜನಸಾಮಾನ್ಯರಿಗೆ ಮೋಸ ಮಾಡಿದೆ. ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಭುಗೌಡ ಬಿರಾದಾರ ಅಸ್ಕಿ, ಒಬಿಸಿ ಮೋರ್ಚಾ ತಾಲೂಕು ಘಟಕದ ಅಧ್ಯಕ್ಷರಾದ ಗುರುನಾಥ ಮುರುಡಿ ಅವರು ಮಾತನಾಡಿ, ಬಿಜೆಪಿ ಸರಕಾರ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿತ್ತು, ಕಾಂಗ್ರೆಸ್ ರೈತ ವಿರೋಧಿ ನೀತಿಯಿಂದ ರಾಜ್ಯದಲ್ಲಿ ಸುಮಾರು 45 ಜನ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವಿದ್ಯುತ್ ಕಣ್ಣು ಮುಚ್ಚಾಲೆ ಆಟದಿಂದ ರೈತಾಪಿ ವರ್ಗ ತೀವ್ರ ತೊಂದರೆಯಲ್ಲಿದ್ದಾರೆ ,ಹಗಲು ಹೊತ್ತಿನಲ್ಲಿ 7 ಗಂಟೆಗಳ ಕಾಲ ನಿರಂತರ ವಿದ್ಯುತ್ ನೀಡಿ ರೈತರಿಗೆ ಧೈರ್ಯ ತುಂಬುವ ಕೆಲಸವಾಗಬೇಕಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಭೀಮನಗೌಡ ಸಿದರಡ್ಡಿ, ಮುಖಂಡರುಗಳಾದ ಭೀಮನಗೌಡ ಲಚ್ಯಾಣ, ವಿಠ್ಠಲ ಯಂಕಂಚಿ, ಸೋಮು ಹಿರೇಮಠ, ಪ್ರಕಾಶ ಗುಂಡಕನಾಳ, ಪ್ರಕಾಶ ದೊಡಮನಿ, ಸೋಮು ದೇವೂರ, ವಿನೋದ ಚವ್ಹಾಣ, ಶರಣು ದಳವಾಯಿ, ಸಂಜು ಹರವಾಳ, ಪವನಗೌಡ ನಾಡಗೌಡ, ಶಂಕರಗೌಡ ಪಾಟೀಲ, ಪ್ರವೀಣ್ ಲಮಾಣಿ, ಸುನೀಲ ಬಡಗೇರ, ಶಿವರಾಜ ತಳವಾರ, ಪಿಂಟು ಬಾಸ್ಕತರ, ನಿಂಗನಗೌಡ ಸುಬೇದಾರ, ಆಕಾಶ ಕಬ್ಬಿನ, ರೇವಣಸಿದ್ದ ಮಣ್ಣೂರ, ಮಡಿವಾಳಪ್ಪ ಹೂಗಾರ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
