
ಉದಯವಾಹಿನಿ ಬಾಗೇಪಲ್ಲಿ: ಮಕ್ಕಳಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಜವಬ್ದಾರಿ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಉಪಕುಲಪತಿ ನಿರಂಜನ್ ವಾನಳ್ಳಿ ರವರು ತಿಳಿಸಿದರು.
ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಬಾಲಕಿಯರ ಶಾಲೆಯಲ್ಲಿ ಪ್ರಥಮ್ ಮೈಸೂರು ಫೌಂಡೇಷನ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಸುಮಾರು ₹10 ಲಕ್ಷ ವೆಚ್ಚದಲ್ಲಿ ವ್ಯವಸ್ಥೆ ಮಾಡಲಾದ ಕಂಪ್ಯೂಟರ್ ಲಾಬ್ ಹಾಗೂ ಡಿಜಿಟಲ್ ಗ್ರಂಥಾಲಯಗಳ ಉದ್ಘಾಟನೆ ಮಾಡಲಾಯಿತು. ಈ ವೇಳೆ ಉಪಕುಲಪತಿ ನಿರಂಜನ್ ವಾನಳ್ಳಿಯರು ಮಾತನಾಡಿ, ಈ ಶಾಲೆಯ ಪಿಎಂ ಶ್ರೀ ಶಾಲೆಯಾಗಿದ್ದು, ಶಾಲೆಗೆ ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ. ಈ ಹಿಂದೆ ಸರ್ಕಾರೇತರ ಸಂಸ್ಥೆಯಾದ ಸೈಗಲ್ ಫೌಂಡೇಷನ್ ವತಿಯಿಂದ ಮೂಲ ಸೌಕರ್ಯಗಳಿಗೆ ಒತ್ತು ನೀಡಲಾಗುತ್ತಿದೆ. ಅವರಿಂದ ಮೊದಲನೇ ಹಂತವಾಗಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಐಟಕ್ ಶೌಚಾಲಯ ಹಾಗೂ ಮಳೆ ಕೊಯ್ಲು ಯೋಜನೆ ಸುಮಾರು ಒಂದು ಕೋಟಿ ರೂಪಾಯಿಗಳು ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದರು. ಶಾಲೆಗೆ ಭೇಟಿ ನೀಡಿದಾಗ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಪ್ರವಚನಗಳನ್ನು ಆಲಿಸುತ್ತಿದ್ದಾರೆ.ಅದನ್ನು ನೋಡಿ ನನಗೆ ತುಂಬಾ ಬೇಸರವಾಯಿತು ಎಂದರು. ಆದ್ದರಿಂದ ಎರಡನೇ ಹಂತದಲ್ಲಿ ಶಾಲಾ ಸಿಬ್ಬಂದಿಯ ಜೊತೆ ಕೈ ಜೋಡಿಸಿ ಮುಂದಿನ ಮೂರು ತಿಂಗಳೊಳಗಾಗಿ ವಿದ್ಯಾರ್ಥಿಗಳಿಗೆ ಕೂರಲು ಅನುಕೂಲವಾಗುವಂತೆ ಡೆಸ್ಕ್ ವ್ಯವಸ್ಥೆ ಮಾಡುತ್ತೆನೆ ಎಂದು ಭರವಸೆ ನೀಡಿದರು. ಏಕೆಂದರೆ ಮಕ್ಕಳಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಜವಬ್ದಾರಿಯಾಗಿದ್ದು, ಶಾಲಾಡಳಿತ ಮಂಡಳಿ, ಶಾಸಕರೊಂದಿಗೆ ಮಾತನಾಡಿ ಅನುಕೂಲ ಮಾಡೋಣ ಎಂದು ತಿಳಿಸಿದರು. ಮಕ್ಕಳಿಗೆ ಬೇಕಾಗುವ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡುತ್ತೆವೆ. ಮಕ್ಕಳು ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಮಟ್ಟದ ವಿಧ್ಯಾಭ್ಯಾಸ ಮಾಡಿ ಹೆತ್ತ ತಂದೆ ತಾಯಿ ಹಾಗೂ ಶಿಕ್ಷಕರಿಗೆ ಹೆಸರು ತರಬೇಕು ಎಂದು ಕಿವಿಮಾತು ಹೇಳಿದರು.ಈ ಸಂದರ್ಭದಲ್ಲಿ ಪ್ರಭಾರಿ ಬಿಇಓ ವೆಂಕಟರಾಮ್, ಮುಖ್ಯ ಶಿಕ್ಷಕ ಆರ್.ಹನುಮಂತ ರೆಡ್ಡಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಹಾಗೂ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ರಾಜಾರೆಡ್ಡಿ , ಶಿಕ್ಷಕರಾದ ಧರ್ಮಪುತ್ರಿ ಲಾವಣ್ಯ, ಹಾಗೂ ಪೋಷಕರು ವಿಧ್ಯಾರ್ಥಿಗಳು ಹಾಜರಿದ್ದರು.
