ಉದಯವಾಹಿನಿ ಕೋಲಾರ:- ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ನಾಯಕರು ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಿತು. ಅದೇ ರೀತಿ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಕೋಲಾರದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಕಸ್ಮಿಕವಾಗಿ ಹೆಜ್ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಸಂಸದ ಮುನಿಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು, ಕಾರ್ಯಕರ್ತರು ಮತ್ತು ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸರು ದಿಕ್ಕಾಪಾಲಾಗಿ ಓಡಿದ ಘಟನೆ ನಡೆಯಿತು.ಸಂಸದರು, ಪೊಲೀಸರು ಸೇರಿ 20ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ಈ ಪೈಕಿ ಕೆಲವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಎಂದು ಸಂಸದರಾದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಅಷ್ಟೇ ಅಲ್ಲದೆ ಬಿಜೆಪಿ ಅವಧಿಯ ಕಾಮಗಾರಿಗಳನ್ನು ತಡೆದಿರುವುದಕ್ಕೆ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ, ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿ. ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!