ಉದಯವಾಹಿನಿ, ಬೆಂಗಳೂರು: ಬನ್ನೇರುಘಟ್ಟದಲ್ಲಿ ಶ್ರೀಗಂಧ ಮರಗಳ್ಳರ ಮೇಲೆ ಶೂಟೌಟ್ ಪ್ರಕರಣಕ್ಕೆ ಸಂಬಂಧ ಪರಾರಿಯಾಗಿದ್ದ ಪ್ರಮುಖ ಆರೋಪಿಯನ್ನು ಬನ್ನೇರುಘಟ್ಟ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಾಲೂರಿನ ನೆಟ್ಟೂರಹಳ್ಳಿಯ ಗೋಪಾಲ್(48) ಬಂಧಿತ ಆರೋಪಿಯಾಗಿದ್ದಾನೆ, ಕೋಲಾರ ಜಿಲ್ಲೆ ಶ್ರೀನಿವಾಸಪುರ ಬಳಿ ಗೋಪಾಲ್ನನ್ನು ಪೊಲೀಸರು ಬಂಧಿಸಿದ್ದಾರೆ. 2018 ಮತ್ತು 2020ರಲ್ಲೂ ಗೋಪಾಲ್ ವಿರುದ್ಧ ಕೇಸ್ ದಾಖಲಾಗಿತ್ತು.ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಪದೇಪದೆ ಕಳ್ಳತನ ಮಾಡುತ್ತಿದ್ದ ಆರೋಪಿಯು ಸಹಚರ ತಿಮ್ಮರಾಯಪ್ಪ ಜೊತೆ ಕಲ್ಕೆರೆ ವಲಯಕ್ಕೆ ಗೋಪಾಲ್ ನುಗ್ಗಿದ್ದು, ಗಂಧದಮರ ಕಡಿಯುವ ವೇಳೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಶ್ರೀಗಂಧ ಮರಗಳ್ಳರನ್ನು ಶರಣಾಗುವಂತೆ ಸೂಚಿಸಿದ್ದಾರೆ. ಆರೋಪಿಗಳು ಶರಣಾಗದ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಫೈರಿಂಗ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರೋಪಿ ಗೋಪಾಲ್ ಪರಾರಿಯಾಗಿದ್ದ.ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಏರಿಯಾದಲ್ಲಿ ಫಾರೆಸ್ಟ್ಗಾರ್ಡ್ ಹಾಗೂ ಇಬ್ಬರು ವಾಚರ್ಸ್ ಗಸ್ತಿನಲ್ಲಿದ್ದರು. ಈ ಜಾಗದಲ್ಲಿ ವನ್ಯ ಜೀವಿಗಳು ಹಾಗೂ ಶ್ರೀಗಂಧ ಮರಗಳು ಇರುವುದರಿಂದ ಕಳ್ಳರ ಹಾವಳಿ ಇದೆ.
