
ಉದಯವಾಹಿನಿ ಕೋಲಾರ :- ಕಡೇ ಶ್ರಾವಣ ಶನಿವಾರದ ಪ್ರಯುಕ್ತ ತಾಲೂಕಿನ ನರಸಾಪುರ ಹೋಬಳಿಯ ಖಾಜಿ ಕಲ್ಲಹಳ್ಳಿ ಗ್ರಾಮದ ಸಮೀಪದ ಬೆಟ್ಟದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.ತಾಲೂಕಿನ ನರಸಾಪುರ ಹೋಬಳಿಯ ಖಾಜಿ ಕಲ್ಲಹಳ್ಳಿ ಬೆಟ್ಟದಲ್ಲಿ ನೆಲೆಸಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ದೇವರಿಗೆ ವಿವಿಧ ಹೂವಿನ ಅಲಂಕಾರಗಳು ಹಾಗೂ ವಿಶೇಷ ಪೂಜಾ ಕೈಂಕರ್ಯಗಳು, ಮಹಾ ಮಂಗಳಾರತಿ ನಡೆದವು ಮತ್ತು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಿತು.ಶ್ರಾವಣ ಶನಿವಾರದ ಪ್ರಯುಕ್ತ ಖಾಜಿ ಕಲ್ಲಹಳ್ಳಿ ಬೆಟ್ಟದಲ್ಲಿ ನೆಲೆಸಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ಖಾಜಿ ಕಲ್ಲಹಳ್ಳಿ, ನರಸಾಪುರ, ಬೆಳ್ಳೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
