ಉದಯವಾಹಿನಿ, ಬೆಂಗಳೂರು: ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.ದೇವಸ್ಥಾನಕ್ಕೆ ಭೇಟಿ ನೀಡಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಭಾರತದೊಂದಿಗಿನ ಸಂಬಂಧದ ಬಗ್ಗೆ ಹೆಮ್ಮೆ ಇದೆ.ಹೆಮ್ಮೆಯ ಹಿಂದೂವಾಗಿ ಭಾರತ ಮತ್ತು ಇಲ್ಲಿಯ ಜನರೊಂದಿಗೆ ಸದಾ ಸಂಪರ್ಕವನ್ನು ಇರಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
