ಉದಯವಾಹಿನಿ, ಇಸ್ಲಾಮಾಬಾದ್: ನಾಲ್ಕು ವರ್ಷಗಳಿಂದ ಲಂಡನ್‌ನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಅಕ್ಟೋಬರ್‌ನಲ್ಲಿ ಸ್ವದೇಶಕ್ಕೆ ಮರಳುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ಶನಿವಾರ ವರದಿ ಮಾಡಿವೆ.
ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ನಾಯಕರಾಗಿರುವ ಷರೀಫ್ ಅವರು ಲಂಡನ್‌ನಲ್ಲಿ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿದ ಸಭೆಯಲ್ಲಿ ಪಾಕಿಸ್ತಾನಕ್ಕೆ ಮರಳುವ ಕುರಿತು ಮಾತನಾಡಿದ್ದಾರೆ. ಆದರೆ, ಪ್ರಯಾಣದ ದಿನಾಂಕದ ಕುರಿತು ಮಾಹಿತಿ ಬಹಿರಂಗಪಡಿಸಿಲ್ಲ ಎಂದು ‘ಡಾನ್’ ಪತ್ರಿಕೆ ವರದಿ ಮಾಡಿದೆ.
71 ವರ್ಷದ ನವಾಜ್ ಷರೀಫ್ ಅವರು 2018ರಲ್ಲಿ ಪಾಕಿಸ್ತಾನದಲ್ಲಿ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾಗಿದ್ದಾರೆ. ಲಾಹೋರ್ ಹೈಕೋರ್ಟ್ ಅನುಮತಿ ಪಡೆದು 2019ರಿಂದ ವೈದ್ಯಕೀಯ ಚಿಕಿತ್ಸೆಗಾಗಿ ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ.
