ಉದಯವಾಹಿನಿ, ವಿಜಯವಾಡ: ಆಂಧ್ರಪ್ರದೇಶದ ಬಹುಕೋಟಿ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಎಸಿಬಿ ನ್ಯಾಯಾಲಯ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಜೈಲಿನಲ್ಲಿರುವ ಸಮಯದಲ್ಲಿ ಮನೆಯಿಂದ ತಯಾರಿಸಿದ ಆಹಾರ, ಔಷಧಿ ಹಾಗು ವಿಶೇಷ ಕೊಠಡಿ ವ್ಯವಸ್ಥೆ ಮಾಡುವಂತೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶನ ನೀಡಿದೆ.
೭೩ರ ಹರೆಯದ ಚಂದ್ರಬಾಬು ನಾಯ್ಡು ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಅಲ್ಲದೆ ಝಡ್ ಪ್ಲಸ್ ಭದ್ರತೆ ಹೊಂದಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ನ್ಯಾಯಾಲಯ ಸೂಚಿಸಿದೆ.
ಚಂದ್ರಬಾಬು ನಾಯ್ಡು ವಿರುದ್ದ ಮಾಡಲಾದ ಆರೋಪಗಳಲ್ಲಿ ನಂಬಲು ಆಧಾರಗಳಿವೆ ಮತ್ತು ತನಿಖೆಯನ್ನು ಪೂರ್ಣಗೊಳಿಸಲು ೨೪ ಗಂಟೆಗಳ ಸಾಕಾಗುವುದಿಲ್ಲ ಎಂದು ಹೇಳಿ ೧೪ ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
