
ಉದಯವಾಹಿನಿ ದೇವರಹಿಪ್ಪರಗಿ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಿಂದಗಿ ಇವರ ಸಹಯೋಗದಲ್ಲಿ ದಸರಾ ಮಹೋತ್ಸವ ಅಂಗವಾಗಿ ಸೆ.13ರಿಂದ ಸೆ.17.ರವರೆಗೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸನ್ 2023-24 ಸಾಲಿನ ದೇವರಹಿಪ್ಪರಗಿ,ಸಿಂದಗಿ ಹಾಗೂ ಆಲಮೇಲ ತಾಲೂಕಿನ ದಸರಾ ಕ್ರೀಡಾಪಟುಗಳು ದಿ.13-09-2023 ರಂದು ದೇವರಹಿಪ್ಪರಗಿ ತಾಲೂಕಿನ ಕ್ರೀಡಾಕೂಟಗಳು ಪಟ್ಟಣದ ಸರ್ಕಾರಿ ಮಾದರಿ ಶಾಲಾ ಆವರಣದಲ್ಲಿ ದಿ.15-09-2023 ರಂದು ಸಿಂದಗಿ ತಾಲೂಕಿನ ಕ್ರೀಡಾಕೂಟಗಳು ತಾಲೂಕು ಕ್ರೀಡಾಂಗಣದಲ್ಲಿ ಮತ್ತು ದಿ.17-09-2023 ರಂದು ಅಲಮೇಲ ತಾಲೂಕಿನ ಕ್ರೀಡಾಕೂಟಗಳು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಲಿವೆ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಗ್ರಾಪಂ ಯಿಂದ ರಹವಾಸಿ ಕಡ್ಡಾಯವಾಗಿ ತರತಕ್ಕದ್ದು ಎಂದು ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಿಂದಗಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
