
ಉದಯವಾಹಿನಿ, ನವದೆಹಲಿ: ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಟಿಪ್ರಾ ಮೋಥಾ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಇತರ ಇಬ್ಬರು ಸಿಬ್ಬಂದಿ ಸೇರಿದಂತೆ ಎರಡೂ ಪಕ್ಷಗಳು ಕನಿಷ್ಠ ೧೨ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಘರ್ಷಣೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ’ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಹಿರಿಯ ಪೊಲೀಸ್ ಅಧಿಕಾರಿ ಜ್ಯೋತಿಷ್ಮನ್ ದಾಸ್ ಚೌಧರಿ ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಬಿಜೆಪಿ ಕಾರ್ಯಕರ್ತರು ಬೃಹತ್ ವಿಜಯೋತ್ಸವವನ್ನು ನಡೆಸಿದ ಸಂದರ್ಭದಲ್ಲಿ ಬುಡಕಟ್ಟು ಪ್ರಾಬಲ್ಯವಿರುವ ಜಂಪೂಯಿಜಾಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ’ತಿಪ್ರಾ ಮೋಥಾ ಕಾರ್ಯಕರ್ತರ ಗುಂಪು ಕೆಲವು ಬಿಜೆಪಿ ಕಾರ್ಯಕರ್ತರನ್ನು ರಾಲಿಗೆ ಹಾಜರಾಗದಂತೆ ತಡೆದ ನಂತರ ಘರ್ಷಣೆ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
