ಉದಯವಾಹಿನಿ, ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಗಡಿ ಭಾಗದಲ್ಲಿ ಚೀನಾ ಆಗಾಗ ತೆಗೆಯುತ್ತಿರುವ ತಂಟೆ ತಕರಾರಿಗೆ ಸೂಕ್ತ ಉತ್ತರ ನೀಡಲು ಅನುವಾಗುವಂತೆ ಗಡಿ ಭಾಗದಲ್ಲಿ ರಸ್ತೆ, ಸೇತುವೆ, ಸುರಂಗ, ವಾಯುನೆಲೆ , ಹೆಲಿಪ್ಯಾಡ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒತ್ತು ನೀಡಿದೆ. ಗಡಿ ಭಾಗದಲ್ಲಿ ಮೂಲ ಸೌಕರ್ಯ ಹೆಚ್ಚಿಸಲು ಕೇಂದ್ರ ಸರ್ಕಾರ ಒತ್ತು ನೀಡಿದೆ. ಇದರಿಂದಾಗಿ ಸೇನಾ ಕಾರ್ಯಾಚರಣೆಗೆ ಮತ್ತಷ್ಟು ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.ಭಾರತ ತನ್ನ ಗಡಿ ಭಾಗದಲ್ಲಿ ಮೂಲಸೌಕರ್ಯ ಹೆಚ್ಚಳದಿಂದ ಗಡಿ ಪ್ರದೇಶಗಳ ಸುರಕ್ಷಿತವಾಗಿಸಲು ಅಗತ್ಯ ಕ್ರಮಕೈಗೊಳ್ಳಲು ಸಹಕಾರಿಯಾಗಲಿದೆ.ಗಡಿ ಭಾಗದಲ್ಲಿ ಹೊಸ ರಸ್ತೆಗಳು, ಸೇತುವೆಗಳು, ಸುರಂಗಗಳು, ಏರ್‍ಫೀಲ್ಡ್‌ಗಳು ಮತ್ತು ಹೆಲಿಪ್ಯಾಡ್‌ಗಳೊಂದಿಗೆ ನಿರ್ಮಾಣ ಮಾಡುವುದರಿಂದ ಯಾವುದೇ ಪರಿಸ್ಥಿತಿ ಎದುರಿಸಲು ಸಹಕಾರಿಯಾಗಲಿದೆ ಎನ್ನಲಾಗಿದೆ.ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಕಳೆದ ಮೂರು ವರ್ಷಗಳಿಂದ ಪೂರ್ವ ಲಡಾಖ್‌ನಲ್ಲಿ ದೇಶವು ಬಿಕ್ಕಟ್ಟಿನಲ್ಲಿ ಸಿಲುಕಿರುವ ನೆರೆಯ ಚೀನಾ ವಿರುದ್ದ ಅಗತ್ಯ ಕ್ರಮ ಕೈಗೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

 

Leave a Reply

Your email address will not be published. Required fields are marked *

error: Content is protected !!