ಉದಯವಾಹಿನಿ ದೇವನಹಳ್ಳಿ: ತಾಲ್ಲೂಕಿನ ಬಿದಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕರ್ನಾಟಕ ರಾಜ್ಯ ಅಪೇಕ್ಸ್‌ ಬ್ಯಾಂಕ್‌ ನೀಡುವ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ’ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ಇತ್ತಿಚೇಗೆ ನಡೆದಿರುವ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ರಾಮಸ್ವಾಮಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ್‌ ಪ್ರಶಸ್ತಿ ಸ್ವೀಕಾರಿಸಿದ್ದಾರೆ.
ಸಂಘದ ಸಿಇಓ ವೆಂಕಟೇಶ್‌ ಮಾತನಾಡಿ ರಾಜ್ಯದಲ್ಲಿ ಎರಡನೇ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಬಿದಲೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘವನ್ನು ಗುರುತಿಸಿ ಪ್ರೋತ್ಸಾಹ ಮಾಡಿರುವುದಕ್ಕೆ ಅಭಾರಿಯಾಗಿರುತ್ತೇನೆ. ಸಂಘದ ಬೆಳವಣಿಗೆಗೆ ಅನೇಕ ಮಹನೀಯರು, ಸಹಕಾರಿಗಳು, ಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ಮಂಡಳಿಯ ಸದಸ್ಯರು ಕಾರಣಕರ್ತರಾಗಿದ್ದರು ಈ ಪ್ರಶಸ್ತಿ ಅವರಿಗೆ ಸಲ್ಲುತ್ತದೆ ಎಂದರು. ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಜಯ್ ದೇವ, ನಿರ್ದೇಶಕರಾದ ಸೊಣ್ಣಪ್ಪ, ಕಾಮೇನಹಳ್ಳಿ ರಮೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ .ವಿ. ಮಂಜುನಾಥ್, ಬಿದಲೂರು ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಸ್ವಾಮಿ, ಸಂಘದ ನಿರ್ದೇಶಕರಾದ ಶಿವಕುಮಾರ್, ತಿಮ್ಮಯ್ಯ, ಮುನಿರಾಜು ಇದ್ದರು.

Leave a Reply

Your email address will not be published. Required fields are marked *

error: Content is protected !!