
ಉದಯವಾಹಿನಿ ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬುರುಜಿನರೊಪ್ಪ ಹಾಗೂ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘನ ತ್ಯಾಜ್ಯ ಘಟಕಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಘನ ತ್ಯಾಜ್ಯ ಘಟಕಗಳ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದ ಅವರು, ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ, ಉಪ ಕಾರ್ಯದರ್ಶಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ನರೇಗಾ ತಾಂತ್ರಿಕ ಸಂಯೋಜಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಜಿಲ್ಲಾ ಸಮಾಲೋಚಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.
