ಉದಯವಾಹಿನಿ, ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ನಾಲವಾರ ಹೋಬಳಿಯ ರಾಂಪೂರಹಳ್ಳಿ ವ್ಯಾಪ್ತಿಯಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಬೇಟೆಯಾಡಿ ಅವುಗಳ ಟ್ರೋಫಿಗಳನ್ನು ಮಾರಾಟ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಹಣಮಂತ ಹೆಳವರ, ಭೀಮರಾಯ ಹೆಳವರ, ಮಲ್ಲಪ್ಪ ಹೆಳವರ ಎಂಬುವವರನ್ನು ಬಂಧಿಸಿ ಮಾರಾಟ ಮಾಡಲು ಸಾಗಿಸುತ್ತಿದ್ದ ಚಿಪ್ಪು ಹಂದಿಯ ಚಿಪ್ಪುಗಳು, ಮುಳ್ಳು ಹಂದಿಯ ಮುಳ್ಳುಗಳು, ಮುಂಗುಸಿಯ ಕೂದಲು, ನೀರು ನಾಯಿ ಚರ್ಮ ಮತ್ತು ಕಾಡು ಹಂದಿಯ ಕೊರೆಗಳು (ದಂತ) ಜಪ್ತಿ ಮಾಡಿದ್ದಾರೆ.
ಅಲ್ಲದೆ ಬೇಟೆಗೆ ಬಳಸಿದ ಭರ್ಚಿ, ಉರುಳು ಹಾಕಲು ಬಳಸುವ ಕ್ಲಚ್ ವೈರ್ ತಂತಿಗಳು, ಹಾರ್ನ್ ಸಮೇತ ಇರುವ ಶಿಖಾರಿ ಬ್ಯಾಟರಿ ಟಾರ್ಚ್, ಚೂರಿ, ಪಂಜಾ, ಮೀನು ಹಿಡಿಯುವ ಬಲೆಗಳು, ಕಬ್ಬಿಣದ ರಾಡುಗಳು, ಮೂರು ಮೊಬೈಲ್‍ಗಳು ಮತ್ತು ಎರಡು ಬೈಕ್‍ಗಳನ್ನು ಜಪ್ತಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!