ಉದಯವಾಹಿನಿ, ನವದೆಹಲಿ: ತಮಿಳುನಾಡಿಗೆ ಪ್ರತಿ ದಿನ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಈ ಸೂಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕದ ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ನಡೆದ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು.
ಈ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿರುವುದು ಕರ್ನಾಟಕದಲ್ಲಿ ಅದರಲ್ಲೂ ಮಂಡ್ಯದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ನಾಳೆ ಮತ್ತು ನಾಡಿದ್ದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು ಈ ಸಂಬಂಧ ಪ್ರಾಧಿಕಾರ ಆದೇಶ ಹೊರಡಿಸಲಿದೆ.
ಪ್ರಸ್ತುತ ಕೆಆರ್ ಎಸ್ ಜಲಟಶಯದಲ್ಲಿ 21 ಟಿಎಂಸಿ ನೀರು ಮಾತ್ರವಿದೆ. ಆದರೂ ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿರುವ ಕಾವೇರಿ ನಿರ್ವಹಣಾ ಸಮಿತಿ ನಿರ್ಧಾರಕ್ಜೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
