ಉದಯವಾಹಿನಿ,ಕೋಲಾರ :  ಮುಳಬಾಗಿಲು ತಾಲೂಕಿನ ಕೊಲದೇವಿ ಶ್ರೀ ಶನೈಶ್ವರ ಬ್ರಹ್ಮ ರಥೋತ್ಸವ ಪ್ರಯುಕ್ತ ಇದೇ ಮೊದಲಬಾರಿಗೆ ಮೈಸೂರಿನಿಂದ ಆನೆಯನ್ನು ತರಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಆನೆ ಕರೆಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರಿ ಆನೆಯನ್ನು ಕುತೂಹಲದಿಂದ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಪೋಲೀಸರು ಮತ್ತು ಅರಣ್ಯಾಧಿಕಾರಿಗಳು, ೩ ಜನ ಮಾವುತರು, ಶಾರ್ಪ್ ಶೂಟರ್ ಒಬ್ಬರು ಸ್ಥಳದಲ್ಲಿ ಹಾಜರಿದ್ದರು.
ಶ್ರೀ ಶನೈಶ್ಚರ ದೇವರಿಗೆ ಹಾಗೂ ಗರುಡ ದೇವರಿಗೆ, ಶ್ರೀ ಆಂಜನೇಯಸ್ವಾಮಿ ದೇವರಿಗೆ ವಿಶೇಷ ಅಲಂಕಾರದೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿನಿಯೋಗ ಮಾಡಲಾಯಿತು.
ಈ ವೇಳೆ ದೇವಿಶ್ರೀ ಗುರೂಜಿ ಶನೈಶ್ಚರ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ಸನಾತನ ಹಿಂದೂಧರ್ಮವನ್ನು ಪ್ರತಿಯೊಬ್ಬ ಹಿಂದೂಗಳು ರಕ್ಷಣೆ ಮಾಡುವುದು ಆದ್ಯ ಕರ್ತವ್ಯವಾಗಿದೆ ಎಂದರಲ್ಲದೆ ತಮಿಳುನಾಡಿನ ಮಂತ್ರಿ ಉದಯನಿಧಿ ಸ್ಟಾಲಿನ್ ಸನಾತನ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ತೀವ್ರವಾಗಿ ಖಂಡಿಸಿದರು. ರಥೋತ್ಸವ ಪ್ರಯುಕ್ತ ಗ್ರಾಮದಲ್ಲಿ ಹಲವಾರು ಅಂಗಡಿಗಳನ್ನು ತಾತ್ಕಾಲಿಕವಾಗಿ ತೆರಯಲಾಗಿತ್ತು.
ಶ್ರೀ ಗರುಡ ದೇವಾಲಯದ ಪ್ರಧಾನ ಅರ್ಚಕ ಜಿ.ಶ್ರೀನಿವಾಸ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆಸಲಾಯಿತು.

Leave a Reply

Your email address will not be published. Required fields are marked *

error: Content is protected !!