ಉದಯವಾಹಿನಿ, ಶಿವಮೊಗ್ಗ : ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ.ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ೧ ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ವಿದ್ಯಾರ್ಥಿಗಳಿಗೆ ಬಿಸಿಯೂಟ ಪ್ರಾರಂಭಿಸಿಲ್ಲ. ಇದರಿಂದ ಬಡ ? ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.
ಕೋಟಿ ರೂ. ವೆಚ್ಚದ ಕಟ್ಟಡ: ಸದರಿ ಶಾಲೆಯ ಮೇಲುಸ್ತುವಾರಿಯನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ನೋಡಿಕೊಳ್ಳುತ್ತಿದೆ. ಸರಿಸುಮಾರು ೨ ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಕಟ್ಟಡ ಕೂಡ ನಿರ್ಮಿಸಲಾಗಿದೆ. ಕಳೆದ ೪ ತಿಂಗಳ ಹಿಂದೆ ಲಷ್ಕರ್ ಮೊಹಲ್ಲಾದಿಂದ ನೂತನ ಕಟ್ಟಡಕ್ಕೆ ಶಾಲೆ ಸ್ಥಳಾಂತರಗೊಂಡಿದೆ.

Leave a Reply

Your email address will not be published. Required fields are marked *

error: Content is protected !!