
ಉದಯವಾಹಿನಿ ಶಿಡ್ಲಘಟ್ಟ: ದೇಶ ಹಾಗೂ ರಾಜ್ಯದಲ್ಲಿ ಶೇಕಡಾ 60 ರಿಂದ 70 ಕುಟುಂಬಗಳು ಆರ್ಥಿಕವಾಗಿ ಹಿಂದುಳಿದಿದ್ದು, ಅವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಕಾರ್ಯಕ್ರಮವನ್ನು ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ರವರ ಅಧ್ಯಕ್ಷತೆಯಲ್ಲಿ ಬುಧವಾರ ಆಯುಷ್ಮಾನ್ ಭವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದು,ಈ ಯೋಜನೆ ಮನೆ ಮನೆಗೂ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದು.ಶಿಡ್ಲಘಟ್ಟ ನಗರದ ತಾಲೂಕು ಆಸ್ಪತ್ರೆಯಲ್ಲಿ ಆಯೋಜಿಸಿದ ಆಯುಷ್ಮಾನ್ ಭವ ಕಾರ್ಯಕ್ರಮವನ್ನು ಶಾಸಕ ಬಿ.ಎನ್ ರವಿಕುಮಾರ್ ಅವರು ಉದ್ಘಾಟಿಸಿದರು.
ಆಯುಷ್ಮಾನ್ ಭವ ಕಾರ್ಯಕ್ರಮವು ಎಲ್ಲಾ ಆರೋಗ್ಯ ಇಲಾಖೆಗಳ ಸಮಗ್ರ ಅಡಿಯಲ್ಲಿ ಎಲ್ಲರಿಗೂ ಆರೋಗ್ಯ ನೀಡುವ ಉದ್ದೇಶದಿಂದ ಪ್ರಾರಂಭಿಸುತ್ತಿದ್ದು ಈ ತಿಂಗಳ 17 ರಿಂದ ಅಕ್ಟೋಬರ್ 2 ಗಾಂಧಿ ಜಯಂತಿಯವರಿಗೂ ನಿರಂತರವಾಗಿ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಮ್ಮ ಆರೋಗ್ಯ ಇಲಾಖೆಯ ಬಗ್ಗೆ ನಿರಂತರವಾಗಿ ಮಾಹಿತಿ ನೀಡಬೇಕು ಹಾಗೂ ಆಯುಷ್ಮಾನ್ ಭವದ ಯೋಜನೆಯಲ್ಲಿ ಯಾವ ಯಾವ ಸೌಲಭ್ಯಗಳು ಸಾರ್ವಜನಿಕರಿಗೆ ಸಿಗುತ್ತವೆ ಎಂಬುದನ್ನು ತಿಳಿಸುವಂತಾಗಬೇಕು ಎಂದು ತಾಲೂಕು ಆರೋಗ್ಯ ಆಡಳಿತಾಧಿಕಾರಿ ಡಾ. ವೆಂಕಟೇಶ್ ಮೂರ್ತಿ ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆಸುಮಿತ್ರ ರಮೇಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ತಾದೂರು ರಘು.ಜಿಲ್ಲಾ ಕುಟುಂಬ ಮತ್ತು ಕಲ್ಯಾಣ ಅಧಿಕಾರಿ ಚಂದ್ರಶೇಖರ್. ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ವಾಣಿ. ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನವತಾಜ್. ಬಿಸಿಎಂ ಅಧಿಕಾರಿ ಪಾಟೀಲ್. ಶಿಕ್ಷಣ ಇಲಾಖೆಯ ಮಂಜುನಾಥ್.ನಗರಸಭೆ ಸದಸ್ಯರಾದ ಅನಿಲ್ ಕುಮಾರ್. ಮಂಜುನಾಥ್. ಮೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉಮೇಶ್. ಎಸ್.ಎಂ ರಮೇಶ್ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಅಧಿಕಾರಿ ಗಳು ಹಾಗೂ ಸಿಬ್ಬಂದಿ ಎನ್‌ಜಿಒ ಪ್ರತಿನಿಧಿಗಳು ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ಹಾಜರಿದ್ದರು.
