ಉದಯವಾಹಿನಿ, ಭೋಪಾಲ್: ವಿರೋಧ ಪಕ್ಷಗಳ ಮೈತ್ರಿಕೂಟ “ಇಂಡಿಯಾ”ಕ್ಕೆ ನಾಯಕರೇ ಇಲ್ಲ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸನಾತನ ಸಂಸ್ಕೃತಿಯ ಮೇಲೆ ದಾಳಿ ಮಾಡಲು ಗುಪ್ತ ಕಾರ್ಯಸೂಚಿ ಅಳವಡಿಸಿಕೊಂಡಿದ್ದು ಇದರ ವಿರುದ್ದ ಹೋರಾಟ ಅನಿವಾರ್ಯ ಎಂದಿದ್ದಾರೆ.
ಇಂಡಿಯಾ ಒಕ್ಕೂಟದ ಸದಸ್ಯರು ಮುಂದಿನ ದಿನಗಳಲ್ಲಿ ನಮ್ಮ ಮೇಲೆ ದಾಳಿ ಹೆಚ್ಚಿಸುತ್ತಾರೆ. ಹೀಗಾಗಿ ದೇಶಾದ್ಯಂತ ಎಲ್ಲಾ ’ಸನಾತನಿಗಳು’ ಮತ್ತು ದೇಶವನ್ನು ಪ್ರೀತಿಸುವ ಜನರು ಎಚ್ಚರವಾಗಿರಬೇಕು. ಅಂತಹವರನ್ನು ತಡೆಯಬೇಕಾಗಿದೆ ಎಂದು ಕರೆ ನೀಡಿದ್ದಾರೆ
ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದ ಬಿನಾದಲ್ಲಿ ೫೦,೭೦೦ ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಇಂಡಿಯಾ ಒಕ್ಕೂಟ ’ಸನಾತನ’ ಸಂಸ್ಕೃತಿಯನ್ನು ಕೊನೆಗೊಳಿಸುವ ನಿರ್ಣಯದೊಂದಿಗೆ ಬಂದಿದೆ. ಇದು ಅವರಿಂದ ಸಾಧ್ಯವಿಲ್ಲ ಎನ್ನುವ ಮೂಲಕ ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಸನಾತನ ಧರ್ಮದ ವಿರುದ್ದ ವಿವಾದಕ್ಕೆ ಹೋರಾಟಕ್ಕೆ ಮುನ್ನುಡಿ ಬರೆದಿದ್ದಾರೆ.
ಸ್ವಾಮಿ ವಿವೇಕಾನಂದ ಮತ್ತು ಲೋಕಮಾನ್ಯ ತಿಲಕರಿಗೆ ಸ್ಫೂರ್ತಿ ನೀಡಿದ ‘ಸನಾತನ ಧರ್ಮ’ವನ್ನು ಇಂಡಿಯಾ ಮೈತ್ರಿಕೂಟದ ಜನರು ಅಳಿಸಿ ಹಾಕಲು ಬಯಸುತ್ತಿದ್ದಾರೆ. ಇಂಡಿಯಾ ಒಕ್ಕೂಟ ಸನಾತನ ಧರ್ಮವನ್ನು ನಾಶಮಾಡಲು ಬಯಸಿದೆ. ಬಹಿರಂಗವಾಗಿ ಸನಾತನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿ
