ಉದಯವಾಹಿನಿ, ಮಾಲೂರು: ಪಟ್ಟಣದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌದ ಸಭಾಂಗಣದಲ್ಲಿ ಕೋಲಾರ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳಿಂದ ನಡೆದ ಸಾರ್ವಜನಿಕ ಕುಂದು ಕೊರತೆಗಳ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ೨೯ ಅರ್ಜಿಗಳು ಸ್ವೀಕೃತಗೊಂಡಿದ್ದು ಕೆಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಹಾಜರಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿ ಸಮಸ್ಯೆಗಳನ್ನು ಬಗೆ ಹರಿಸಲು ಸೂಚಿಸಲಾಗಿದೆ ಎಂದು ಕೋಲಾರ ಜಿಲ್ಲಾ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಆಂಜಿನಪ್ಪ ಹೇಳಿದರು.
ಕೋಲಾರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ಮಾಲೂರು ಪಟ್ಟಣದಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಸಭೆ ಏರ್ಪಡಿಸಲಾಗಿತ್ತು, ಸಾರ್ವಜನಿಕರು ಸಭೆಗೆ ಆಗಮಿಸಿ ಕಂದಾಯ ಇಲಾಖೆ ಸೇರಿದ ೧೩ ಅರ್ಜಿಗಳು ಪುರಸಭೆ ೨, ಅರಣ್ಯ ಇಲಾಖೆ ೧, ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ೧, ಗ್ರಂಥಾಲಯ ೧, ತಾಲೂಕು ಪಂಚಾಯಿತಿಗೆ ಸಂಬಂಧಿಸಿದ ೬, ಭೂಮಾಪನ ಇಲಾಖೆ ೩, ವಿವಿಧ ರೀತಿಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ನೀಡಿದ್ದು, ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಹಾಜರಿದ ಅಧಿಕಾರಿಗಳು ಬಗೆಹರಿಸಲು ಸೂಚಿಸಲಾಗಿದೆ.
