ಉದಯವಾಹಿನಿ,ಹೈದರಾಬಾದ್,: ಆಂಧ್ರ ರಾಜಕಾರಣ ಸ್ಪೋಟಕ ತಿರುವು ಪಡೆದುಕೊಳ್ಳುತ್ತಿದೆ. ಜೈಲಿನಲ್ಲಿರುವ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಖ್ಯಾತ ನಟ ಹಾಗೂ ಜನಸೇನೆ ನಾಯಕ ಪವನ್ ಕಲ್ಯಾಣ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ, ಟಿಡಿಪಿ ಜೊತೆ ಜನಸೇನೆಯ ಮೈತ್ರಿಯನ್ನು ಘೋಷಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಜನಸೇನೆ ಸ್ಪರ್ಧಿಸಲಿದೆ ಎಂದು ಪವರ್ ಸ್ಟಾರ್ ಪವನ್ ಕಲ್ಯಾಣ್ ಗುರುವಾರ ಹೇಳಿದ್ದಾರೆ.ತೆಲುಗು ದೇಶಂ ಪಕ್ಷದ ಶಾಸಕ ಹಾಗೂ ನಟ ಬಾಲಕೃಷ್ಣ ಮತ್ತು ನಾರಾ ಲೋಕೇಶ್ ಅವರೊಂದಿಗೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ನಂತರ ಪವನ್ ಕಲ್ಯಾಣ್ ಈ ಘೋಷಣೆ ಮಾಡಿದ್ದಾರೆ.
ಸುಮಾರು 40 ನಿಮಿಷಗಳ ಕಾಲ ಈ ನಾಯಕರ ಸಭೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪವನ್ ಕಲ್ಯಾಣ್, ‘ಆಂಧ್ರಪ್ರದೇಶವು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ಭರಿಸಲು ಸಾಧ್ಯವಿಲ್ಲ. ನಾನು ಇಲ್ಲಿಯ ವರೆಗೆ ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೆ. ಇಂದು ನಾನು ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ನಂತರ ಮಹತ್ವದ ತೀರ್ಮಾನಕ್ಕೆ ಬಂದಿದ್ದೇನೆ. ಜನಸೇನೆ ಮತ್ತು ಟಿಡಿಪಿ ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ನಿರ್ಧರಿಸಿದ್ದೇನೆ’ ಎಂದು ತಿಳಿಸಿದರು.
‘ಕೆಲ ರಾಜಕೀಯ ನೀತಿಗೆ ಸಂಬಂಧಿಸಿದಂತೆ ನಾನು ಚಂದ್ರಬಾಬು ನಾಯ್ಡು ಅವರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದೇನೆ. ನಾವು ಈ ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ. ಆದರೆ, ನಾನು ಅವರ ಅನುಭವವನ್ನು ಗೌರವಿಸುತ್ತೇನೆ. ನಾಯಕನಾಗಿ ಬೆಳೆದಿರುವ ಅವರ ಸಾಮರ್ಥ್ಯಕ್ಕೆ ನಾನು ಶಿರಬಾಗಿದ್ದೇನೆ. ಅವರು ಸೈಬರಾಬಾದ್ ಅನ್ನು ಸಾಧ್ಯವಾಗಿಸಿದ ವ್ಯಕ್ತಿಯಾಗಿದ್ದಾರೆ. ಹೈದರಾಬಾದ್‌ನಲ್ಲಿ ಐಟಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ
