ಉದಯವಾಹಿನಿ , ಢಾಕಾ : ಬಾಂಗ್ಲಾದೇಶದ ರಾಜಧಾನಿ ಢಾಕಾದ ಮಾರುಕಟ್ಟೆಯಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ನೂರಾರು ಅಂಗಡಿಗಳು ಸುಟ್ಟುಹೋಗಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಮೊಹಮ್ಮದ್ಪುರ ಮಾರುಕಟ್ಟೆಯಲ್ಲಿ ಹರಡಿದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗೆ ಸುಮಾರು ಆರು ಗಂಟೆಗಳು ಬೇಕಾಯಿತು.
