ಉದಯವಾಹಿನಿ ,ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿಗೆ ನೀರು ಪೂರೈಕೆ ಮಾಡುವ ಜವಾಬ್ದಾರಿ ಹೊತ್ತಿರುವ ಜಲಮಂಡಳಿ ಕಾವೇರಿ ನೀರಾವರಿ ನಿಗಮಕ್ಕೆ ಪತ್ರವೊಂದನ್ನು ಬರೆದಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟು ಕೆಆರ್‌ಎಸ್ ಜಲಾಶಯ ಬರಿದಾಗುತ್ತಿರುವ ಹೊತ್ತಿನಲ್ಲಿಯೇ ಈ ಪತ್ರವನ್ನು ಬರೆದು ಬೆಂಗಳೂರು ನಗರದ ನೀರಿಗಾಗಿ ಬೇಡಿಕೆ ಇಡಲಾಗಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾವೇರಿ ನೀರಾವರಿ ನಿಗಮಕ್ಕೆ ಪತ್ರ ಬರೆದಿದೆ. ನಗರಕ್ಕೆ ನೀರು ಪೂರೈಕೆ ಮಾಡಲು ಪ್ರತಿ ತಿಂಗಳು 1.6 ಟಿಎಂಟಿಸಿ ಅಡಿ ನೀರು ಮೀಸಲಿಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದೆ. ಕಾವೇರಿ 1, 2, 3 ಮತ್ತು 4ನೇ ಹಂತದ ಯೋಜನೆಗಳ ಮೂಲಕ ಬಿಬಿಎಂಪಿ ವ್ಯಾಪ್ತಿಗೆ ಜಲಮಂಡಳಿ ನೀರು ಪೂರೈಕೆ ಮಾಡುತ್ತದೆ.
