
ಉದಯವಾಹಿನಿ ಕುಶಾಲನಗರ :-ಕೊಡಗು ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ.) ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-೨೦೨೩ ಸಮೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಗ್ರಾ.ಪಂ.ಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು.ಜಿಲ್ಲೆಯನ್ನು ಈಗಾಗಲೇ ಒಡಿಎಫ್ ಪ್ಲಸ್ ಎಂದು ಘೋಷಿಸಲಾಗಿದೆ. ಗ್ರಾ.ಪಂ.ಗಳಲ್ಲಿ ಸ್ವಚ್ಛ ವಾಹಿನಿಯ ಮೂಲಕ ಮನೆ ಮನೆಯಿಂದ ಕಸ ಸಂಗ್ರಹಿಸಿ ಸೂಕ್ತವಾಗಿ ನಿರ್ವಹಣೆ ಮಾಡಲಾಗುತ್ತಿದೆ ಎಂದರು.ಇದೇ ವೇಳೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲ ಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2೦23. ಸಮೀಕ್ಷೆ ಮೂಲಕ ಗ್ರಾ.ಪಂ.ಗಳಲ್ಲಿ ಅನುಷ್ಠಾನ ಮಾಡಿರುವ ನೈರ್ಮಲ್ಯ ಘಟಕಾಂಶಗಳು ಹಾಗೂ ಒಡಿಎಫ್ ಪ್ಲಸ್ ಸುಸ್ಥಿರತೆಗೊಳಿಸಿ, ಮೂರು ಹಂತದಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸರ್ವೆ ಕೈಗೊಂಡು ಒಡಿಎಫ್ ಪ್ಲಸ್ ಮಹಾತ್ವಕಾಂಕ್ಷೆ, ಒಡಿಎಫ್ ಪ್ಲಸ್ ರೈಸಿಂಗ್, ಒಡಿಎಫ್ ಪ್ಲಸ್ ಮಾದರಿ ವಿಭಾಗಗಳಲ್ಲಿ ಯಶಸ್ಸು ಸಾಧಿಸಿ ಸಂಪೂರ್ಣ ಒಡಿಎಫ್ ಪ್ಲಸ್ ಎಂದು ಘೋಷಿಸಲಾಗಿದೆ ಎಂದರು.
ಈ ವಿಭಾಗಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಮಡಿಕೇರಿ ತಾಲೂಕಿನ ಎಮ್ಮೆಮಾಡು, ಕಡಗದಾಳು, ಪೆರಾಜೆ, ಬಲ್ಲಮಾವಟಿ ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ, ಪೊನ್ನಂಪೇಟೆ, ವಿರಾಜಪೇಟೆ ತಾಲೂಕಿನ ಹಾಲುಗುಂದ, ಚೆನ್ನಯ್ಯನಕೋಟೆ, ಪಾಲಿಬೆಟ್ಟ, ಕುಶಲಾನಗರ ತಾಲೂಕಿನ ಗುಡ್ಡೆಹೊಸೂರು, ನಂಜರಾಯಪಟ್ಟಣ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿಗಳ ಗ್ರಾ.ಪಂ.ಅಧ್ಯಕ್ಷರು ಮತ್ತು ಪಿಡಿಒ ಅವರನ್ನು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.ಗ್ರಾ.ಪಂ.ಅಧ್ಯಕ್ಷರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಗೆ ಸಂಬAಧಿಸಿದ0ತೆ ಅಭಿಪ್ರಾಯ ಹಂಚಿಕೊ0ಡರು. ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಸೋಮವಾರಪೇಟೆ ತಾ.ಪಂ.ಇಒ ಜಯಣ್ಣ, ಜಿಲ್ಲಾ ಎಸ್.ಬಿ.ಎಂ.ಸಮಾಲೋಚಕರು ಹಾಜರಿದ್ದರು.
