ಉದಯವಾಹಿನಿ, ಕೆ.ಆರ್.ಪುರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೆಂಗಳೂರು ಪೂರ್ವ ತಾಲ್ಲೂಕಿನ ತಹಸೀಲ್ದಾರ್ ಕಛೇರಿಯಲ್ಲಿ ಭಾರತ ಸಂವಿಧಾನದ ಮುನ್ನುಡಿ ಓದುವ ಮೂಲಕ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ವೈ.ರವಿ ಅವರು ಸಂವಿಧಾನದಲ್ಲಿ ನೀಡಿರುವ ಹಕ್ಕುಗಳ ಜೋತೆಗೆ ಕರ್ತವ್ಯಗಳನ್ನು ನಿರ್ವಹಿಸುವಂತೆ ಮನವಿ ಮಾಡಿದರು.
ಪ್ರಪಂಚದ ಅತಿದೊಡ್ಡ ಸಂವಿಧಾನ ಹೊಂದಿರುವ ದೇಶ ಭಾರತವಾಗಿದ್ದು,ಪ್ರಜೆಗಳು ಸಂವಿಧಾನ ಅರಿವು ಪಡೆದುಕೊಳ್ಳುವಂತೆ ನುಡಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ರಾಜ್ಯ ಸರಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಇಓ ವಸಂತ್ ಕುಮಾರ್, ಬಿಇಓ ರಾಮಮೂರ್ತಿ,ಅಧಿಕಾರಿಗಳಾದ ಮಲ್ಲಿಕಾರ್ಜುನ, ಅನೀಲ್, ಮುಖಂಡರಾದ ನಟರಾಜ್, ದಿಲೀಪ್ ಇದ್ದರು.
ಸುದ್ದಿಚಿತ್ರ:ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೆಂಗಳೂರು ಪೂರ್ವ ತಾಲ್ಲೂಕಿನ ತಹಸೀಲ್ದಾರ್ ಕಛೇರಿಯಲ್ಲಿ ಭಾರತ ಸಂವಿಧಾನದ ಮುನ್ನುಡಿ ಓದುವ ಮೂಲಕ ಆಚರಣೆ ಮಾಡಲಾಯಿತು.
