ಉದಯವಾಹಿನಿ, ಇಂಫಾಲ್‌: ಮಣಿಪುರದಲ್ಲಿ ಮೇ ತಿಂಗಳಿನಲ್ಲಿ ಪ್ರಾರಂಭವಾದ ಜನಾಂಗೀಯ ಕಲಹದಲ್ಲಿ ಇದುವರೆಗೆ ಒಟ್ಟು 175 ಜನರು ಮೃತಪಟ್ಟಿದ್ದು, 1,108 ಜನರು ಗಾಯಗೊಂಡಿದ್ದಾರೆ ಮತ್ತು 32 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಒಟ್ಟು 4,786 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಹಾಗೂ 386 ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇನ್‌ಸ್ಪೆಕ್ಟರ್-ಜನರಲ್ ಆಫ್ ಪೊಲೀಸ್ (ಐಜಿಪಿ) ಐ.ಕೆ ಮುವಾ, ‘ಮಣಿಪುರವನ್ನು ಸಹಜ ಸ್ಥಿತಿಗೆ ತರಲು ಪೊಲೀಸರು, ಕೇಂದ್ರ ಪಡೆಗಳು ಮತ್ತು ನಾಗರಿಕರ ಆಡಳಿತವು ಹಗಲಿರುಳು ಪ್ರಯತ್ತಿಸುತ್ತಿದೆ. ಈ ಮೂಲಕ ಮಣಿಪುರವನ್ನು ಮೊದಲಿನ ಸ್ಥಿತಿಗೆ ತರುವ ಭರವಸೆಯನ್ನು ಸಾರ್ವಜನಿಕರಿಗೆ ನಾವು ನೀಡಬಹುದು. ಕಾಣೆಯಾಗಿದ್ದ ಶಸ್ತ್ರಾಸ್ತ್ರಗಳಲ್ಲಿ 1,359 ಬಂದೂಕುಗಳು ಮತ್ತು 15,050 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!