ಉದಯವಾಹಿನಿ ಬೆಂಗಳೂರು: ಪ್ರಜಾಪ್ರಭುತ್ವ ಚಿರಾಯುವಾಗಲಿ ಎಂಬ ಆಶಯದೊಂದಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರು ವಾಚನ ಮಾಡಿದರು. ಬಿಬಿಎಂಪಿ ಅಧಿಕಾರಿಗಳು ಮತ್ತು ಶಿಕ್ಷಣ ತಜ್ಞರು ಈ ಸಂವಿದಾನ ಪ್ರಸ್ತಾವನೆಯನ್ನು ಓದುವ ಮೂಲಕ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರಾದ ಡಾ. ಕೆ ಆರ್ ವೇಣುಗೋಪಾಲ್, ಡಾ. ಗೀತಾ ರಾಮಾನುಜಂ ಸೇರಿದಂತೆ ಬಿಬಿಎಂಪಿ ಶಿಕ್ಷಣ ವಿಭಾಗದ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
