ಉದಯವಾಹಿನಿ ತಾಳಿಕೋಟಿ: ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿ ಸಂವಿಧಾನದ ಕುರಿತು ಅರಿವು ಇರಬೇಕಾಗಿರುವುದು ಅತ್ಯಗತ್ಯವಾಗಿದೆ ಈ ಪ್ರಜ್ಞೆಯನ್ನು ಜಾಗೃತಿಗೊಳಿಸಲಿಕ್ಕಾಗಿಯೇ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತದೆ ಎಂದು ತಶಿಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಶುಕ್ರವಾರ ಪಟ್ಟಣದ ಸರ್ಕಾರಿ ಕನ್ನಡ ಶಾಲೆ ಆವರಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ತಾಲೂಕ ಆಡಳಿತದ ವತಿಯಿಂದ ಹಮ್ಮಿಕೊಂಡ ಸವಿದಾನ ಪೀಠಿಕೆ ವಾಚನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನದ ಆಶಯ ಮತ್ತು ಮೂಲತತ್ವಗಳನ್ನು ಅರಿತುಕೊಳ್ಳುವ ಪ್ರಯತ್ನ ನಾವೆಲ್ಲರೂ ಮಾಡೋಣ ಎಂದರು. ಶಿಕ್ಷಕ ಪ್ರೇಮನಗೌಡ ಪಾಟೀಲ್ ಸಂವಿಧಾನ ಪೀಠಿಕೆ ವಿಶ್ಲೇಷಣೆ ಮಾಡುತ್ತಾ ಸಂವಿಧಾನವನ್ನು ಸಾಮೂಹಿಕವಾಗಿ ವಾಚನ ಮಾಡುವ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಹಮ್ಮಿಕೊಂಡಿದೆ ಇಂಥ ಮಹತ್ವದ ದಿನದಂದು ಸಂವಿಧಾನದ ಪೀಠಿಕೆ ಭ್ರಾತೃತ್ವ ಸಾಮರಸ್ಯ ಹಾಗೂ ಸಮಾನತೆಯ ಕುರಿತು ಅರಿತುಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು. ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಸವಿಧಾನ ಪೀಠಿಕೆಯ ಸಾಮೂಹಿಕ ವಾಚನ ಮಾಡಿಸಿದರು. ವೇದಿಕೆಯಲ್ಲಿ ತಾಪಂ ಕಾರ್ಯನಿರ್ವ ಹಣಾಧಿಕಾರಿ ಬಿ. ಆರ್. ಬಿರಾದಾರ. ಪುರಸಭೆ ಮುಖ್ಯ ಅಧಿಕಾರಿ ಯು ಎಸ್ ಘಟಕಾಂಬಳೆ ಹಾಗೂ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರು ವಿವಿಧ ಸಂಘಟನೆಗಳು ಪದಾಧಿಕಾರಿಗಳು ನಗರದ ಗಣ್ಯರು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಎನ್. ವಿ. ಕೋರಿ ಸ್ವಾಗತಿಸಿದರು. ಗ್ರಾಮ ಆಡಳಿತಾಧಿಕಾರಿ ಎಸ್. ಎಸ್. ಅಂಗಡಿ ನಿರೂಪಿಸಿ ವಂದಿಸಿದರು.
