
ಉದಯವಾಹಿನಿ ಕುಶಾಲನಗರ :-ಗೌರಿ-ಗಣೇಶ ಹಬ್ಬ ಆಚರಣೆ ಸಂಬAಧ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ವರ್ಣಿತ್ ನೇಗಿ ಅವರು ಕೋರಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಕಾನೂನು ಮತ್ತು ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಏನಾದರೂ ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತರುವಂತೆ ಸಲಹೆ ಮಾಡಿದರು.
ನಗರಸಭೆ ಸದಸ್ಯರಾದ ಅರುಣ್ ಶೆಟ್ಟಿ ಅವರು ಮಾತನಾಡಿ ಗೌರಿ-ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಗರದ ಗಣಪತಿ ಬೀದಿಯಿಂದ ಮಹದೇವ ಪೇಟೆ ಮತ್ತು ಬನ್ನಿ ಮಂಟಪದವರೆಗೆ ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡಬೇಕು ಎಂದು ಕೋರಿದರು. ಸಿದ್ದಾಪುರದ ಪ್ರಮುಖರೊಬ್ಬರು ಗೌರಿ-ಗಣೇಶ ವಿಸರ್ಜನೆ ಸಂದರ್ಭದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡುವಂತಾಗಬೇಕು ಎಂದು ಕೋರಿದರು. ಜಿ.ಪಂ.ಸಿಇಒ ಅವರು ಸ್ಥಳೀಯವಾಗಿ ಕೆಲವು ಕಾಮಗಾರಿಗಳು ಆಗಬೇಕಿದ್ದಲ್ಲಿ, ಸ್ಥಳೀಯ ಗ್ರಾ.ಪಂ., ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಗಮನಕ್ಕೆ ತರುವಂತೆ ಸಲಹೆ ಮಾಡಿದರು.
ಬ್ಯಾನರ್ ಮತ್ತು ಪೋಸ್ಟರ್ ಅಳವಡಿಸಲು ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಧ್ವನಿವರ್ಧಕ ಸಂಬAಧಿಸಿದAತೆ ಸುಪ್ರಿಂ ಕೋರ್ಟ್ ನಿಯಮಗಳನ್ನು ಪಾಲಿಸಬೇಕು. ರಾತ್ರಿ ೧೦ ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು. ಇದಕ್ಕೆ ಧ್ವನಿಗೂಡಿಸಿ ಮಾತನಾಡಿದ ಚೇತನ್ ಅವರು ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ಆದರೆ ಪೊಲೀಸ್ ಇಲಾಖೆಯವರು ೫ ಲಕ್ಷ ರೂ.ಬಾಂಡ್‌ನ್ನು ಬರೆಸಿಕೊಳ್ಳುವುದು ಏಕೆ ಎಂದು ಪ್ರಶ್ನಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಯಮವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಅವರು ಹೇಳಿದರು.ಸಭೆಯ ಆರಂಭದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣ ರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ. ನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿ ವಿಸರ್ಜಿಸಬೇಕು. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳಾದ ಬಲೂನ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‌ಗಳು, ಪ್ಲಾಸ್ಟಿಕ್ ಐಸ್‌ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೆöÊರೀನ್(ಥರ್ಮೊಕೋಲ್) ಬಳಸದಂತೆ ನಿಗಾವಹಿಸುವುದು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
