ಉದಯವಾಹಿನಿ ಮುದಗಲ್ : ಶಾಲಾ ಮಕ್ಕಳಲ್ಲಿ ಅಡಗಿರುವ  ಪ್ರತಿಭೆಯನ್ನು ಹೊರ ಹಾಕಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉತ್ತಮವಾದ ವೇದಿಕೆಯಾಗಿದೆ ಎಂದು ಮುದಗಲ್ ವಲಯ ಶಿಕ್ಷಣ ಸಂಯೋಜಕ ರಾಮ ಚಂದ್ರಪ್ಪ ಅವರು ಹೇಳಿದರು ರಾಯಚೂರ ಜಿಲ್ಲೆಯ ಲಿಂಗಸೂಗೂರ ತಾಲೂಕಿನ ಮುದಗಲ್ ಪಟ್ಟಣದ ಡಾ: ಎಸ್, ಬಿ, ಬೊಮ್ಮಸಾಗರ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಆವರಣದಲ್ಲಿ ಹಮ್ಮಿಕೊಂಡ ವಲಯ ಮಟ್ಟದ ಪ್ರತಿಭಾ ಕಾರಂಜಿ‌ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವದರಿಂದ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ, ಅಲ್ಲದೇ ಮಾನಸಿಕ ಮತ್ತು ದೈಹಿಕ ಸದೃಡತೆ ಕೂಡ ಬೆಳೆಯುತ್ತದೆ  ಎಂದು ಹೇಳಿದರು ಜಿಲ್ಲಾ ಪಂಚಾಯತ ರಾಯಚೂರು ಹಾಗೂ ಕ್ಷೆತ್ರ ಶಿಕ್ಷಣಾಧಿಕಾರಿ ಕಾರ್ಯಲಯ ಲಿಂಗಸುಗೂರ, ಸಮೂಹ ಸಂಪನ್ಮೂಲ್ ಕೇಂದ್ರದ ಮುದಗಲ್  ಮತ್ತು ಡಾ: ಎಸ್, ಬಿ, ಬೊಮ್ಮಸಾಗರ ಶಾಲೆಯ ಸಂಯುಕ್ತ ಆಶ್ರಯದಲ್ಲಿ 2023-2024 ನೇ ಸಾಲಿನ ಮುದಗಲ್ ವಲಯ ಮಟ್ಟದ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಜರುಗಿತು ಪುರಸಭೆ ಸದಸ್ಯೆ ಜಯಶ್ರೀ ಜೇಡಿ ರವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ನೀತಾ,ಎಸ್,ಬೊಮ್ಮಸಾಗರ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಶರಣಪ್ಪ ತಲೇಖಾನ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಮಲ್ಲಿಕಾರ್ಜನ ಗೌಡರ,ಬಾಲಚಂದ್ರ, ವಾಣಿಶ್ರೀ, ಹಾಗೂ ವಿವಿಧ ಶಾಲೆಗಳ ಮುಖ್ಯಗುರುಗಳು, ಸಹಶಿಕ್ಷಕರು ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!