ಉದಯವಾಹಿನಿ,ಬೆಂಗಳೂರು: ಗಣೇಶ ಹಬ್ಬಕ್ಕೆ ರಾಜಧಾನಿ ಬೆಂಗಳೂರಲ್ಲಿ ತಯಾರಿ ಜೋರಾಗಿದ್ದು, ಬಿಬಿಎಂಪಿ ಪಾಲಿಕೆಯಿಂದ ಗಣೇಶ ವಿಸರ್ಜನೆಗೆ ಕಲ್ಯಾಣಿಗಳು ಸಿದ್ಧವಾಗಿದ್ದು, ಅನಾಹುತ ತಪ್ಪಿಸಲು ತಲಾ ಕಲ್ಯಾಣಿಗೆ ೮೦ ನುರಿತ ಈಜುಗಾರರನ್ನು ತಾತ್ಕಾಲಿಕ ನೇಮಿಸಲಾಗಿದೆ.ಮನೆ, ಕಚೇರಿ ಹಾಗೂ ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿ ವಿಸರ್ಜನೆಗೆ ನೂರಕ್ಕೂ ಅಧಿಕ ಸ್ಥಳಗಳನ್ನು ಪಾಲಿಕೆ ವ್ಯವಸ್ಥೆ ಮಾಡಿದೆ. ಗಣೇಶ ಮೂರ್ತಿ ವಿಸರ್ಜನೆಗೆ ಮನೆಗಳಿಗೆ ಹತ್ತಿರದಲ್ಲಿಯೇ ಪ್ರತ್ಯೇಕ ವ್ಯವಸ್ಥೆಯನ್ನು ಬಿಬಿಎಂಪಿ ಮಾಡಿದೆ.
ಅದರಲ್ಲೂ, ಪಾಲಿಕೆಯ ೮ ವಲಯಗಳ ೨೭ ವಿಧಾನಸಭಾ ಕ್ಷೇತ್ರಗಳಲ್ಲಿ ತಾತ್ಕಾಲಿಕ ಸಂಚಾರಿ ಟ್ಯಾಂಕರ್‌ಗಳನ್ನು ವ್ಯವಸ್ಥೆ ಮಾಡಿದೆ. ೫ ಇಂಚಿನಿಂದ ೩ ಅಡಿ ಎತ್ತರದ ಎಲ್ಲ ಮಣ್ಣಿನ ಗಣೇಶ ಮೂರ್ತಿಗಳನ್ನು ಮೊಬೈಲ್ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಲು ತಯಾರಿ ಮಾಡುತ್ತಿದೆ. ದೊಡ್ಡ ಮೂರ್ತಿಗಳ ವಿಸರ್ಜನೆ ಮಾಡಲು ಒಟ್ಟು ೧೨ ತಾತ್ಕಾಲಿಕ ಕಲ್ಯಾಣಿಗಳನ್ನು ವ್ಯವಸ್ಥೆ ಮಾಡಿದೆ.
ಅದರಲ್ಲಿ ನಗರದ ಯಡಿಯೂರು, ಹೆಬ್ಬಾಳ, ಸ್ಯಾಂಕಿ ಟ್ಯಾಂಕಿ ಕೆರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ವಿರ್ಸಜರ್ನೆಗೆ ಜನರು ಬರುವ ಸಾಧ್ಯತೆ ಇದ್ದು, ಸದ್ಯ ಕಲ್ಯಾಣಿಗಳಲ್ಲಿ ಹೊಳೆತ್ತಿ, ಬಣ್ಣ ಬಳಿಯಲಾಗಿದೆ. ಜತೆಗೆ, ನಗರದ ಯಡಿಯೂರು ಕೆರೆಯಲ್ಲಿ ದೊಡ್ಡ ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ವಿರ್ಜನೆ ಮಾಡಲು ಬರುವ ಸಾಧ್ಯಾತೆ ಇರುವುದರಿಂದ ಹೈಟೆಕ್ ವ್ಯವಸ್ಥೆ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.
ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಮತ್ತು ಇತರೆ ಕೆರೆ, ಕಲ್ಯಾಣಿಗಳಲ್ಲಿ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಜತೆಗೆ ಕಲ್ಯಾಣಿಗಳ ಬಳಿ ಭದ್ರತೆ ದೃಷ್ಟಿಯಿಂದ ಪೊಲೀಸರು, ಸಿಸಿ ಕ್ಯಾಮರಾ, ವಿದ್ಯುತ್‌ದೀಪ, ನುರಿತ ಈಜುಗಾರರು, ಕ್ರೇನ್, ಆಂಬುಲೆನ್ಸ್ ಸೌಲಭ್ಯ ಇರಲಿದೆ ಎಂದು ಅವರು ವಿವರಿಸಿದರು.
