ಉದಯವಾಹಿನಿ,ಬಳ್ಳಾರಿ: ಪ್ರತಿಯೊಬ್ಬ ಉದ್ದೇಶಿತ ಫಲಾನುಭವಿಗೆ ಆರೋಗ್ಯ ಯೋಜನೆಗಳನ್ನು ಅತ್ಯುತ್ತಮವಾಗಿ ತಲುಪಿಸುವ ‘ಆಯುಷ್ಮಾನ್ ಭವ’ ಅಭಿಯಾನಕ್ಕೆ ಚಾಲನೆ ನೀಡಿದ್ದು, ಒಂದೇ ಕಾರ್ಯಕ್ರಮದಡಿಯಲ್ಲಿ ವಿವಿಧ ಆರೋಗ್ಯ ಸೇವೆಗಳು, ಸೌಲಭ್ಯಗಳು, ಜಾಗೃತಿ ಸಭೆಗಳು, ಸ್ವಚ್ಚತಾ ಅಭಿಯಾನ, ರಕ್ತದಾನ ಶಿಬಿರಗಳು, ಅಂಗಾಂಗ ದಾನ ಜಾಗೃತಿ ಮತ್ತು ನೊಂದಣಿ ಹಾಗೂ ಕ್ಷಯ ರೋಗಿಗಳಿಗೆ ನಿ-ಕ್ಷಯ್ ಮಿತ್ರದಡಿ ಪೌಷ್ಠಿಕ ಆಹಾರ ಕಿಟ್‍ಗಳನ್ನು ವಿತರಿಸುವ ಕಾರ್ಯ ಒಳಗೊಂಡಿವೆ. ಪ್ರತಿಯೊಬ್ಬರೂ ಆರೋಗ್ಯ ಸೇವೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
‘ಅಂತ್ಯೋದಯ’ದ ದೃಷ್ಟಿಕೋನವನ್ನು ಇಟ್ಟುಕೊಂಡು ಜನತೆಗೆ ಆರ್ಥಿಕ ಸಂಕಷ್ಟವಿಲ್ಲದೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳಾದ ರೋಗ ನಿರೋಧಕ, ರೋಗ ನಿವಾರಕ ಪುನರ್ವಸತಿ ಉಪಶಾಮಕಾರಿ ಹಾಗೂ ಆರೋಗ್ಯ ವರ್ಧಕ ಸಲಹೆಗಳನ್ನು ಜನರಿಗೆ ತಲುಪಿಸಲು ಹಾಗೂ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯದ ಸೇವೆಗಳನ್ನು ಪ್ರತಿ ಗ್ರಾಮ ಮಟ್ಟದಲ್ಲಿ ತಲುಪಿಸಲು ಆಯುಷ್ಮಾನ್ ಭವಃ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಾಗಿದೆ
