ಉದಯವಾಹಿನಿ, ನವದೆಹಲಿ: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ಎದುರಿಸಲು “ಇಂಡಿಯಾ ಮೈತ್ರಿಕೂಟ”ದ ಜೊತೆಯಾಗಿ ಗಟ್ಟಿಯಾಗಿ ನಿಂತು ಹೋರಾಡುವ ಅಗತ್ಯವಿದೆ ಎಂದು ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ನಾಯಕರಿಗೆ ಸಂದೇಶ ರವಾನಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾದ ನಂತರ ಪುನರ್ ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೊದಲ ಸಮಿತಿ ಸಭೆಯಲ್ಲಿ ಭಾಗಿಯಾಗಿ ಪಕ್ಷದ ನಾಯಕರು ಜೊತೆಯಾಗಿ ಇಂಡಿಯಾ ಜೊತೆ ನಿಲ್ಲಬೇಕಾಗಿದೆ ಎಂದು ಕಿವಿಮಾತು ಹೇಳಿದ್ದಾರೆ.
ಈ ಮೂಲಕ ಇಂಡಿಯಾ ಮೈತ್ರಿಕೂಟಕ್ಕೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೂಡ ಸಂದೇಶ ಕಳುಹಿಸಿದ್ದಾರೆ. ದೇಶದ ಏಕತೆ ಮತ್ತು ಅಖಂಡತೆ ಕಾಪಾಡಲು ವಿರೋದ ಪಕ್ಷಗಳು ಒಗ್ಗೂಡಿ ಹೋರಾಟ ಮಾಡುವ ಅಗತ್ಯ ಮತ್ತು ಅನಿವಾರ್ಯತೆ ಇದೆ ಎಂದು ತಿಳಿಸಿದ್ದಾರೆ.
ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ ಸಮನ್ವಯ ಸಮಿತಿಯ ಮೊದಲ ಸಭೆಯ ಕೆಲವು ದಿನಗಳ ನಂತರ ಸೋನಿಯಾ ಗಾಂಧಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಇಂಡಿಯಾ ಮೈತ್ರಿಕೂಟ ಕೆಲವು ರಾಜ್ಯಗಳಲ್ಲಿ ಸೀಟು ಹಂಚಿಕೆಯ ವ್ಯವಸ್ಥೆಗಳನ್ನು ಲೆಕ್ಕಾಚಾರ ಮಾಡುವಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿದ್ದರೂ, ಇತರರಲ್ಲಿ ವಿಶೇಷವಾಗಿ ಪಶ್ಚಿಮ ಬಂಗಾಳ, ದೆಹಲಿ ಮತ್ತು ಪಂಜಾಬ್‌ನಲ್ಲಿ ಕಠಿಣ ಸಮಯವನ್ನು ನಿರೀಕ್ಷಿಸಲಾಗಿದೆ ಎನ್ನುವ ವಿಷಯವನ್ನು ಕಾರ್ಯಕಾರಿ ಸಮಿತಿಯ ಮುಂದೆ ಇಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!