ಉದಯವಾಹಿನಿ, ಹೈದರಾಬಾದ್: ಕಳೆದ ಒಂಬತ್ತೂವರೆ ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲಾ ಪ್ರಮುಖ ರಂಗಗಳಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಹೇಳಿದ್ದಾರೆ.“ಕಳೆದ ಒಂಬತ್ತು ವರ್ಷಗಳಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೇಂದ್ರದಲ್ಲಿ ಪ್ರಮುಖ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಕಳೆದ ಒಂಬತ್ತೂವರೆ ವರ್ಷಗಳಿಂದ ಸಾಮಾನ್ಯ ಜನರ ಕಾಳಜಿ ಮತ್ತು ಕುಂದುಕೊರತೆಗಳನ್ನು ಪರಿಹರಿಸುವಲ್ಲಿ ಬದ್ಧ ಸಂಕಲ್ಪದೊಂದಿಗೆ ಕೇಂದ್ರದಲ್ಲಿ ಪ್ರಮುಖ ವಿರೋಧ ಪಕ್ಷವಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ ಎಂದಿದ್ದಾರೆ.
