ಉದಯವಾಹಿನಿ, ನವದೆಹಲಿ: ಸುದೀರ್ಘ ಸಮಯದಿಂದ ಬಾಕಿ ಇರುವ ಮಹಿಳಾ ಮೀಸಲು ವಿದೇಯಕ ಮಂಡನೆ ಕಾಂಗ್ರೆಸ್ ಪಕ್ಷದ ಕನಸು ಎಂದು ಪಕ್ಷದ ವಕ್ತಾರ ಜೈರಾಮ್ ರಮೇಶ್ ಹೇಳಿದ್ದಾರೆ.
ಈ ವಾರಾಂತ್ಯದಲ್ಲಿ ಹೈದರಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿಯೂ ಕೂಡ ಮಹಿಳಾ ಮೀಸಲಾತಿ ನಿರ್ಣಯ ಅಂಗೀಕಾರ ಮಾಡಲಾಗಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಿದೆ” ಎಂದು ಹೇಳಿದ್ದಾರೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಪಂಚಾಯತ್ ಮತ್ತು ನಗರಪಾಲಿಕೆಗಳಲ್ಲಿ ಮೂರನೇ ಒಂದು ಭಾಗದಷ್ಟು ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ಮಸೂದೆಗಳನ್ನು ಮೇ ೧೯೮೯ ರಲ್ಲಿ ಮೊದಲ ಬಾರಿಗೆ ಮಂಡಿಸಿದ್ದರು ಎಂದು ನೆನಪು ಮಾಡಿದ್ದಾರೆ.
ಮಹಿಳಾ ಮೀಸಲಾತಿ ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟರೂ ೧೯೮೯ರಲ್ಲಿ ಆದರೆ ರಾಜ್ಯಸಭೆಯಲ್ಲಿ ವಿಫಲವಾಯಿತು ಎಂದು ಅವರು ಹೇಳಿದ್ದಾರೆ
೧೯೯೩ರ ಏಪ್ರಿಲ್‌ನಲ್ಲಿ ಅಂದಿನ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರು ಪಂಚಾಯತಿ ಮತ್ತು ನಗರಪಾಲಿಕೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದ ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ಮಸೂದೆಗಳನ್ನು ಮರು ಮಂಡಿಸಿದರು.
