ಉದಯವಾಹಿನಿ, ಬೆಂಗಳೂರು: ಕಟ್ಟಡಗಳ ತ್ಯಾಜ್ಯ ಸೇರಿದಂತೆ ಇನ್ನಿತರೆ ವಸ್ತುಗಳನ್ನು ರಸ್ತೆ ಬದಿ ಅಡ್ಡಲಾಗಿ ಹಾಕಿದರೆ ಪ್ರತಿ ಟನ್ ಗೆ ಹತ್ತು ಸಾವಿರ ರೂಪಾಯಿ ದಂಡ ವಿಧಿಸುವುದಾಗಿ ಬಿಬಿಎಂಪಿ ಕಟ್ಟಡ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ಅನಧಿಕೃತ ವಿಲೇವಾರಿಗಾಗಿ ತ್ಯಾಜ್ಯ ಉತ್ಪಾದಕರನ್ನೊಳಗೊಂಡಂತೆ ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣೆ,ವಿಲೇವಾರಿದಾರರಿಗೂ ಸಹ ನಿಯಮಾವಳಿಗಳನ್ವಯ ೧೦,೦೦೦ ಪ್ರತಿ ಟನ್‌ಗೆ ದಂಡವನ್ನು ವಿಧಿಸಲಾಗುವುದು. ಅಷ್ಟೇ ಅಲ್ಲದೆ, ಪರಿಸರ (ಸಂರಕ್ಷಣೆ) ಕಾಯ್ದೆ ೧೯೮೬ರನ್ವಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖೇನ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದೆ.
ನಗರದ ಹೊರವಲಯದಲ್ಲಿ ಪಾಲಿಕೆಯ ವ್ಯಾಪ್ತಿಯ ಹೊರಗಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿಯಲ್ಲಿ, ಇಕ್ಕೆಲಗಳಲ್ಲಿ ಅನಧಿಕೃತ, ಅನಾಮಧೇಯ ವ್ಯಕ್ತಿಗಳಿಂದ ಹಾಗೂ ಏಜೆನ್ಸಿಗಳಿಂದ ಕಟ್ಟಡ ಮತ್ತು ಭಗ್ನಾವಶೇಷ, ತ್ಯಾಜ್ಯದ ಅನಧಿಕೃತ ವಿಲೇವಾರಿಯು ಅತಿರೇಕವಾಗಿ ನಡೆಯುತ್ತಿರುವುದನ್ನು ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ಸಂಚಾರಕ್ಕೆ ಅಡ್ಡಿ ಮಾತ್ರವಲ್ಲದೆ, ಸಾರ್ವಜನಿಕರಲ್ಲಿ ಬೆಂಗಳೂರು ನಗರದ ಸ್ವಚ್ಛತೆಯ ಕುರಿತು ಋಣಾತ್ಮಕ ಮನೋಭಾವನೆಯನ್ನುಂಟು ಮಾಡುತ್ತಿದೆ. ಹಾಗಾಗಿ, ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ವೈಜ್ಞಾನಿಕ, ಅಧಿಕೃತ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯ ಪ್ರಾಥಮಿಕ ಜವಾಬ್ದಾರಿ ಕಟ್ಟಡ ಮಾಲೀಕರ ಮೇಲಿದೆ.

Leave a Reply

Your email address will not be published. Required fields are marked *

error: Content is protected !!